ಲಕ್ಷ್ಮಣ ಸವದಿ ಬಳಿಕ ಬೆಳಗಾವಿ ಬಿಜೆಪಿಯಲ್ಲಿ ಮತ್ತೆರಡು ವಿಕೆಟ್ ಪತನಗೊಳ್ಳಲಿದೆ. ಬಿಜೆಪಿಗೆ ಗುಡ್‌ಬೈ ಹೇಳಲು ರಾಮದುರ್ಗ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಮತ್ತು ಅನಿಲ್ ಬೆನಕೆ ಮುಂದಾಗಿದ್ದಾರೆ
ಒಂಡಾಯದ ಕಾವು ಹೆಚ್ಚಾಗಿದೆ(Karnataka Assembly Elections 2023) . ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಟಿಕೆಟ್ ಸಿಗದ ಆಕಾಂಕ್ಷಿಗಳು ಬಂಡಾಯ ಸಾರಿದ್ದರು. ಆದ್ರೆ ಈಗ ಲಕ್ಷ್ಮಣ ಸವದಿ ಬಳಿಕ ಬೆಳಗಾವಿ ಬಿಜೆಪಿಯಲ್ಲಿ ಮತ್ತೆರಡು ವಿಕೆಟ್ ಪತನಗೊಳ್ಳಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಬಿಜೆಪಿಗೆ ಗುಡ್‌ಬೈ ಹೇಳಲು ರಾಮದುರ್ಗ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ(Mahadevappa Yadawad) ಮತ್ತು ಅನಿಲ್ ಬೆನಕೆ(Anil Benake) ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಅಥಣಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಅಲ್ಲಿ ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ನೀಡಿದೆ. ಹಾಗಾಗಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವ ಯೋಚನೆಯಲ್ಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಲಕ್ಷ್ಮಣ್ ಸವದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಇನ್ನು ಮತ್ತೊಂದೆಡೆ ರಾಮದುರ್ಗ ಟಿಕೆಟ್ ಕೈತಪ್ಪಿದಕ್ಕೆ ಆಕ್ರೋಶಗೊಂಡಿರುವ ಮಹಾದೇವಪ್ಪ ಯಾದವಾಡ ಅವರು ಕೂಡು ಬಿಜೆಪಿಗೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿ ಟಿಕೆಟ್ ಬದಲಾವಣೆ ಮಾಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.
ನಾನು ಶಾಸಕನಾಗಿ 3,100 ಕೋಟಿ ಅನುದಾನ ತಂದು ಅಭಿವೃದ್ಧಿ ಮಾಡಿದ್ದೇನೆ. ಬಿಜೆಪಿ ಶಿಸ್ತಿನ ಪಕ್ಷ, ಆದ್ರೆ ಕಾಂಗ್ರೆಸ್‌ನಿಂದ ಚಿಕ್ಕರೇವಣ್ಣ ಕರೆತಂದು ಟಿಕೆಟ್ ಘೋಷಣೆ ಮಾಡಿದ್ದಾರೆ. ನಿನ್ನೆ ಬೆಂಬಲಿಗರ ಸಭೆಯಲ್ಲಿ ನಮ್ಮ ಕಾರ್ಯಕರ್ತರು ಬಿಜೆಪಿ ಅನ್ಯಾಯ ಮಾಡಿದೆ ಎಂದಿದ್ದಾರೆ. ನಮ್ಮ ತಾಲೂಕಿನಲ್ಲಿ ನಾಲ್ಕೈದು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿದ್ದರು. ಸಿದ್ದರಾಮಯ್ಯ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗಿಯಾಗಿದ್ದ ವ್ಯಕ್ತಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಮೂಲದ ಚಿಕ್ಕರೇವಣ್ಣಗೆ ಟಿಕೆಟ್ ಹಾಕಿದ್ದಾರೆ. ನನ್ನ ಬದಲು ಸ್ಥಳೀಯರಿಗೆ ಅವಕಾಶ ನೀಡಿದ್ರೆ ನಾನು ಸುಮ್ಮನಿರುತ್ತಿದ್ದೆ. ಹೊರಗಿನ ಚಿಕ್ಕರೇವಣ್ಣಗೆ ಮಣೆ ಹಾಕಿದಕ್ಕೆ ನನಗೆ ಬೇಸರ ಇದೆ. ರಾಜ್ಯ, ರಾಷ್ಟ್ರೀಯ ಮುಖಂಡರು ನನಗೆ ಟಿಕೆಟ್ ನೀಡುವ ಕೆಲಸ ಮಾಡಬೇಕು. ಅವರು ನೀಡಿದ ಭರವಸೆ ಈಡೇರಿಸದಿದ್ರೆ ಬಿಜೆಪಿಗೆ ರಾಜೀನಾಮೆ ಸಲ್ಲಿಸುವೆ. ನಾನು ಬಿಜೆಪಿ ತೊರೆದು ಯಾವುದೇ ಪಕ್ಷ ಸೇರುವುದಿಲ್ಲ. ಸೋಮವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವೆ ಎಂದ ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಶಾಸಕ ಮಹಾದೇವಪ್ಪ ಯಾದವಾಡ ಅಸಮಾಧಾನ ಹೊರ ಹಾಕಿದ್ದಾರೆ.