ಕಲಬುರಗಿ : ಕಲಬುರಗಿ ಜಿಲ್ಲೆಯ ಚಿತ್ತಾಪುರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಅತಿಥಿ ಉಪನ್ಯಾಸಕ ರವಿ ಪಟ್ಟೇದಾರ ಎಂಬುವವರನ್ನು ನಗರದ ಹೊರವಲಯದ ಕುಸನೂರು ಬಳಿ ದುಷ್ಕರ್ಮಿಗಳು 35 ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದ ರವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬಾಲಿಸಿಕೊಂಡು ಬಂದ ರವಿ ಅಣ್ಣನ ಹೆಂಡತಿ ಕಡೆಯವರು ಡಿಕ್ಕಿ ಹೊಡೆಸಿ ಕೆಳಕ್ಕೆ ಕೆಡವಿ ಚಾಕುವಿನಿಂದ ಇರಿದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.