Breaking News

ರಾಜಕೀಯ ನಾಯಕರಿಗೂ ಚುನಾವಣಾ ನೀತಿ ಸಂಹಿತೆ ಬಿಸಿ

Spread the love

 ದಕ್ಷಿಣ ಕನ್ನಡ : ಚುನಾವಣಾ ನೀತಿ ಸಂಹಿತೆ ಬಿಸಿ ಜನಸಾಮಾನ್ಯರಿಗೆ ಮಾತ್ರವಲ್ಲ ರಾಜಕೀಯ ನಾಯಕರಿಗೂ ತಟ್ಟಲು ಆರಂಭವಾಗಿದೆ.

 

 

ಸದ್ಯ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸುತ್ತಿದ್ದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ತಡೆದು ತಪಾಸಣೆ ನಡೆಸಿದ್ದಾರೆ‌.

ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ತಡೆದು ನಿಲ್ಲಿಸಿ ಕಾರು ಪರಿಶೀಲನೆ ನಡೆಸಿ ನಂತರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

 

 

ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿರುವ ಇನೋವಾ ಕಾರು ಹಾಗೂ ಐದು ಪೊಲೀಸ್ ಭದ್ರತಾ ವಾಹನದೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಬರುತ್ತಿದ್ದ ವೇಳೆ ತಪಾಸಣೆ ನಡೆಸಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ