Breaking News

ನಾಲ್ಕನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.ಸಿಎಂ ಬಸವರಾಜ ಬೊಮ್ಮಾಯಿ

Spread the love

ಹಾವೇರಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಕರ್ನಾಟಕ ವಿಧಾನಸಭೆ ಘೋಷಣೆ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಬರಲಿರುವ ಸಿಎಂ ಬೊಮ್ಮಾಯಿ, ಇಂದು ದಿನವೀಡಿ ಕಾರ್ಯಕರ್ತರೊಂದಿಗೆ ಚರ್ಚಿಸಲಿದ್ದಾರೆ.

ಸತತ ಮೂರು ಬಾರಿ ಶಿಗ್ಗಾಂವಿ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿ ಸ್ಥಾನಕ್ಕೆ ಏರಿರುವ ಅವರು ನಾಲ್ಕನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಶಿಗ್ಗಾಂವಿ ತಹಸೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ. ಬಳಿಕ, ಸವಣೂರು, ಕಾರಡಗಿ, ಶಿಗ್ಗಾಂವಿ ಸೇರಿ ಜಿಲ್ಲಾ ಪಂಚಾಯಿತಿವಾರು ಕಾರ್ಯಕರ್ತರ ಜೊತೆಗೆ ಮಾತುಕತೆ ನಡೆಸಿ ಸಂಜೆ ವಾಪಸ್ ಬೆಂಗಳೂರಿಗೆ ತೆರಳಲಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ