Breaking News

ರಾಷ್ಟ್ರೀಯ ನಾಯಕರ 20 ದಿನಗಳ ಪ್ರವಾಸದ ರೂಪುರೇಷೆ

Spread the love

ಬೆಂಗಳೂರು: “ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರವಾಸಗಳ ಕುರಿತು ಚರ್ಚೆ ಮಾಡಿದ್ದೇವೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಪಕ್ಷದ ಕಚೇರಿಯಲ್ಲಿ ನಡೆದ ಚುನಾವಣಾ ‌ನಿರ್ವಹಣಾ ಸಮಿತಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
“ರಾಷ್ಟ್ರೀಯ ನಾಯಕರ ಚುನಾವಣಾ ಪ್ರವಾಸಗಳ ಕುರಿತು ಸಭೆ ನಡೆಸಿದ್ದೇವೆ. ಮುಂದಿನ 20 ದಿನಗಳ ರೂಪುರೇಷೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು.

ಎಲ್ಲ ಅಭ್ಯರ್ಥಿಗಳ ಜೊತೆ ಸಂಪರ್ಕ ಇಟ್ಟುಕೊಂಡಿದ್ದೇವೆ. ಅಭ್ಯರ್ಥಿಗಳ 3ನೇ ಪಟ್ಟಿ ಶೀಘ್ರ ಬಿಡುಗಡೆ ಆಗುತ್ತದೆ ಎಂದರು.
ಶನಿವಾರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಸಭೆ ನಡೆಯುವ ವಿಚಾರದ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಜಗದೀಶ್ ಶೆಟ್ಟರ್ ಸಭೆ ಎಲ್ಲವೂ ಗೊತ್ತಿದೆ” ಎಂದರಲ್ಲದೇ “ನನ್ನ ಹೆಣ ಕೂಡಾ ಬಿಜೆಪಿ ಕಚೇರಿ ಕಡೆ ಹೋಗಲ್ಲ” ಎಂಬ ಲಕ್ಷ್ಮಣ ಸವದಿ ಹೇಳಿಕೆ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ “ಸವದಿ ಸ್ವಲ್ಪ ಭಾವುಕರಾಗಿದ್ದಾರೆ” ಎಂದು ಹೇಳಿದರು.


Spread the love

About Laxminews 24x7

Check Also

ಬೆಂಗಳೂರಲ್ಲಿ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ಇಲ್ಲಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ