ಮಂಗಳೂರು: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೂಡಿನ ಬಳಿಯ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿದೆ. ಹಾಸನ ಜಿಲ್ಲೆಯ ಕುಮಾರ್ ಮಂಗಳೂರಿನಲ್ಲಿ ಖಾಸಗಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಇಂದು ಬಂಟ್ವಾಳದ ಗೂಡಿನ ಬಳಿ ಹಳೆ ಸೇತುವೆಯ ಮೇಲಿಂದ ನೇತ್ರಾವತಿ ನದಿಗೆ ಹಾರಿದ್ದಾನೆ.
ಇದನ್ನು ನೋಡಿದ ಗೂಡಿನ ಬಳಿಯ ಮಹಮ್ಮದ್ ಮತ್ತು ಅವರ ಸ್ನೇಹಿತರ ತಂಡ ದೋಣಿಯ ಮೂಲಕ ತೆರಳಿ ಸೇತುವೆಯ ಕಂಬದಲ್ಲಿ ಸಿಲುಕಿಕೊಂಡಿದ್ದ ಕುಮಾರ್ ನನ್ನು ರಕ್ಷಿಸಿ ಕರೆ ತಂದಿದ್ದಾರೆ. ಸದ್ಯ ಯುವಕನನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಂಟ್ವಾಳ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ತಂಡ ಹಿಂದೆಯೂ ಇದೇ ರೀತಿ ಹಲವರನ್ನು ರಕ್ಷಣೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
Laxmi News 24×7