ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಫೈಟ್: ಟೆಂಗಿನಕಾಯಿ ಸೇರಿ ಆಕಾಂಕ್ಷಿಗಳ ಹಾದಿ ಸುಗಮ?
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ತೊರೆಯುವ ನಿರ್ಧಾರ ಹಿನ್ನೆಲೆಯಲ್ಲಿ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಬಿಜೆಟಿ ಟಿಕೆಟ್ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದು, ಯಾರಿಗೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.
ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹುಬ್ಬಳ್ಳಿಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ ಜಗದೀಶ್ ಶೆಟ್ಟರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು.
ರಾಜೀನಾಮೆ ಬಳಿಕ ಹುಬ್ಬಳ್ಳಿಗೆ ತೆರಳಲಿರುವ ಜಗದೀಶ್ ಶೆಟ್ಟರ್ ಬೆಂಬಲಿಗರ ಅಭಿಪ್ರಾಯ ಪಡೆದು ಕಾಂಗ್ರೆಸ್ ಸೇರ್ಪಡೆಯಾಗುವ ನಿಟ್ಟಿನಲ್ಲಿ ಚರ್ಚಿಸಲಿದ್ದಾರೆ. ಒಟ್ಟಾರೆ ಶೆಟ್ಟರ್ ಮುಂದಿನ ನಡೆ ಕುತೂಹಲ ಮೂಡಿಸಿದೆ.