Breaking News

ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ವಾಹನ ಪರವಾನಗಿ ರದ್ದುಗೊಳ್ಳಲಿದೆ.

Spread the love

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಆದೇಶ ನೀಡಿದೆ. ಒಂದು ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ವಾಹನ ಪರವಾನಗಿ ರದ್ದುಗೊಳ್ಳಲಿದೆ.

ಮೋಟಾರು ವಾಹನ ಕಾಯ್ದೆಯಡಿ ಸಾರಿಗೆ ಇಲಾಖೆ ಆಯುಕ್ತರ ಕಚೇರಿ ಆದೇಶ ಹೊರಡಿಸಿದ್ದು, ಬೈಕ್ ಸವಾರ ಹಾಗೂ ಹಿಂಬದಿಯ ಸವಾರ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸದೇ ಇದ್ದರೆ 3 ತಿಂಗಳು ಕಾಲ ಲೈಸನ್ಸ್ ರದ್ದುಗೊಳಿಸಲಾಗುವುದು. ಅಲ್ಲದೇ ದಂಡವನ್ನು ವಿಧಿಸಲಾಗುವುದು ಎಂದು ತಿಳಿಸಿದೆ.

ಹಲವು ಬಾರಿ ಹೆಲ್ಮೆಟ್ ಕಡ್ಡಾಯಗೊಳಿಸಿದ್ದರೂ ಕೂಡ ವಾಹನಸವಾರರು ರಾಜಾರೋಷವಾಗಿ ಹೆಲ್ಮೆಟ್ ಧರಿಸದೇ ಬೈಕ್ ಓಡಿಸುತ್ತಿದ್ದರು. ಅಲ್ಲದೇ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಲೇ ಇದೆ. ಈ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಹೆಲ್ಮೆಟ್ ಕಡ್ಡಾಯಗೊಳಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ


Spread the love

About Laxminews 24x7

Check Also

ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಲಿ: ಸಿಎಂ

Spread the loveಬೆಂಗಳೂರು: ದಕ್ಷಿಣ ಭಾರತದಲ್ಲಿ  ಸುಪ್ರೀಂಕೋರ್ಟ್  ಪೀಠ ಸ್ಥಾಪನೆ ಆಗಬೇಕು ಅಂತ ಸಿಎಂ ಸಿದ್ದರಾಮಯ್ಯ  ಒತ್ತಾಯ ಮಾಡಿದ್ದಾರೆ. ಜಿಕೆವಿಕೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ