Breaking News

ವಿಶೇಷ ವಿಮಾನದಲ್ಲಿ ಕಾಂಗ್ರೆಸ್ ಸೇರಲು ಪ್ರಯಾಣ ಬೆಳೆಸಿದ ಶೆಟ್ಟರ್

Spread the love

ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ 6 ಸೀಟರ್ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.

ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರುವುದು ನಿಶ್ಚಿತವಾಗಿದ್ದು, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದೇ ಕಾಂಗ್ರೆಸ್ ಸೇರಲಿದ್ದಾರೆ ಎಂದು ಗೊತ್ತಾಗಿದೆ.

ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಶೆಟ್ಟರ್ ಅವರಿಗೆ ಹುಬ್ಬಳ್ಳಿ – ಧಾರವಾಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಜತ್ ಉಳ್ಳಾಗಡ್ಡಿಮಠ ಮತ್ತು ಇನ್ನಿತರ ಕೆಲವು ಕಾಂಗ್ರೆಸ್ ಪ್ರಮುಖರು ಸಾಥ್ ನೀಡಿದ್ದಾರೆ. ವಿಮಾನವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಸಿವಕುಮಾರ ಅವರೇ ವ್ಯವಸ್ಥೆ ಮಾಡಿದ್ದಾರೆ ಎಂದು ಗೊತ್ತಾಗಿದೆ.

ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ನಂತರ ಅವರು ಕಾಂಗ್ರೆಸ್ ಸೇರಲಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ