ಕೋಲಾರ: ತಾಲ್ಲೂಕಿನ ನರಸಾಪುರ ಹೋಬಳಿಯ ದಿನ್ನೆ ಹೊಸಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಚಿತ್ರವಿದ್ದ ಫಲಕಕ್ಕೆ ಕಿಡಿಗೇಡಿಗಳು ಮಸಿ ಬಳಿದು ವಿರೂಪಗೊಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.
ಸದ್ಯ ಫಲಕವನ್ನು ಬಟ್ಟೆಯಲ್ಲಿ ಮುಚ್ಚಲಾಗಿದೆ.
ಭಾನುವಾರ ವೇಮಗಲ್ ಠಾಣೆಗೆ ಧಾವಿಸಿದ ಗ್ರಾಮಸ್ಥರು, ದಲಿತ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರು,
ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ನಂತರ ದೂರು ಸಲ್ಲಿಸಿದರು.
‘ಕಿಡಿಗೇಡಿಗಳು ಯಾರೇ ಆಗಿರಲಿ ಹಳ್ಳಿಗಳಲ್ಲಿ ನೆಲೆಸಿರುವ ಶಾಂತಿ ಸುವ್ಯವಸ್ಥೆ ಹಾಳು ಮಾಡುವವರನ್ನು ಕೂಡಲೇ ಬಂಧಿಸಬೇಕು’ ಎಂದು ಒತ್ತಾಯಿಸಿದರು. ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಕಲ್ವಮಂಜಲಿ ರಾಮು ಶಿವಣ್ಣ, ದಲಿತ ಸಂಘರ್ಷ ಸಮಿತಿಯ ಮೇಡಿಯಾಳ ಮುನಿ ಆಂಜಿನಪ್ಪ ಇದ್ದರು.
Laxmi News 24×7