Breaking News

ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ ಶೆಟ್ಟರ್

Spread the love

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ, ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಹ್ಲಾದ್ ಜೋಶಿ ಸೇರಿ ಜಗದೀಶ್ ಶೆಟ್ಟರ್ ಅವರನ್ನು ಮನವೊಲಿಸುವ ಯತ್ನ ವಿಫಲವಾಗಿರುವ ಬೆನ್ನಲ್ಲೇ ಈಗ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ ಹೇಳಿದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡ ಪಕ್ಷಕ್ಕೆ ವಿದಾಯ ಹೇಳಿರುವುದು ಈಗ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಭಾರಿ ಹೊಡೆತ ಬಿದ್ದಂತಾಗಿದೆ.ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಒಪ್ಪದ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ತೀವ್ರ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.ಅವರು ಈ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದರು.ಹೈಕಮಾಂಡ್ ಶೆಟ್ಟರ್ ಅವರ ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಈಗ ಅವರು ಅನಿವಾರ್ಯವಾಗಿ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ