ಬಾಗಲಕೋಟೆ: ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್.ಆರ್ ಪಾಟೀಲ ಅವರನ್ನು ಬೆಂಗಳೂರಿಗೆ ಬರುವಂತೆ ಹೈಕಮಾಂಡ್ ಸೂಚಿಸಿದೆ.
ಕಾಂಗ್ರೆಸ್ ಮುಖಂಡ ವೇಣುಗೋಪಾಲ್ ಅವರು ಭೇಟಿಯಾಗುವಂತೆ ಕರೆ ಮಾಡಿ ಆಹ್ವಾನಿಸಿದ್ದಾರೆ.
ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದರು.
ಪಕ್ಷ ಬದಲಾವಣೆ ಮಾಡಬಹುದು ಎಂಬ ಚರ್ಚೆಯ ಹಿನ್ನಲೆಯಲ್ಲಿ ಮಾತುಕತೆಗೆ ಕರೆಯಲಾಗಿದೆ.