Breaking News

ಸೇತುವೆಗೆ ಡಿಕ್ಕಿ ಹೊಡೆದ ಬೊಲೆರೊ ವಾಹನ; ಒಂದೇ ಕುಟುಂಬದ ಮೂವರ ಸಾವು

Spread the love

ಬಾಗಲಕೋಟೆ: ಬೊಲೆರೊ ವಾಹನವೊಂದು ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ೊಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ತಾವರಗೇರಿಯ ಶಾಮಿದ್ ಸಾಬ್ ಕಿಡ್ದೂರನಾಯಕ, ಮೌಲಾಸಾಬ್ ಕಿಡ್ದೂರನಾಯಕ ಹಾಗೂ ಇಮಾಂಬಿ ಕಿಡ್ದೂರನಾಯಕ ಮೃತಪಟ್ಟವರು. ಈ ಪೈಕಿ ಒಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಉಸಿರು ಚೆಲ್ಲಿದ್ದಾರೆ.

ಇವರೆಲ್ಲ ಬೊಲೆರೊ ವಾಹನದಲ್ಲಿ ವಿಜಯಪುರದಿಂದ ತಾವರಗೇರಿಯ ಪ್ರಾರ್ಥನಾ ಮಂದಿರವೊಂದಕ್ಕೆ ಭೇಟಿ ನೀಡಿ ಮರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಈ ಕುರಿತು ಇಳಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ