Breaking News

ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ಹೊಂದಿದ ದೇಗುಲಗಳಲ್ಲಿ ನಂ. 1 ಸ್ಥಾನದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ 123 ಕೋಟಿ ರೂ. ಸಂಗ್ರಹ

Spread the love

ಬೆಂಗಳೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಮತ್ತು ರಾಜ್ಯದಲ್ಲೇ ಅತಿ ಹೆಚ್ಚಿನ ಆದಾಯ ಹೊಂದಿದ ಮುಜರಾಯಿ ದೇಗುಲಗಳಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 2022 -23ನೇ ಸಾಲಿನಲ್ಲಿ 123.64 ಕೋಟಿ ರೂಪಾಯಿ ಆದಾಯ ಬಂದಿದೆ.

 

ಕಳೆದ ಎರಡು ವರ್ಷಗಳಲ್ಲಿ ಕೊರೋನಾ ಕಾರಣದಿಂದ ಕಡಿಮೆ ಆದಾಯ ಬಂದಿತ್ತು. 2019-20 ನೇ ಸಾಲಿನಲ್ಲಿ 98.92 ಕೋಟಿ ರೂ., 2020 -2021 ರಲ್ಲಿ 68.94 ಕೋಟಿ ರೂ., 2021 -22 ರಲ್ಲಿ 72.73 ಕೋಟಿ ರೂ. ಆದಾಯ ಗಳಿಸಿದ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಪ್ರಸಕ್ತ ಆರ್ಥಿಕ ವರ್ಷದಲ್ಲಿ 123 ಕೋಟಿ ರೂಪಾಯಿ ಆದಾಯ ಪಡೆದುಕೊಂಡಿದೆ. ಕೊರೋನಾ ಕಾರಣದಿಂದಾಗಿ ಕಡಿಮೆಯಾಗಿದ್ದ ಆದಾಯ ಈ ಬಾರಿ ಏರಿಕೆ ಕಂಡಿದೆ.


Spread the love

About Laxminews 24x7

Check Also

25 ಸಾವಿರ ಲಂಚ ಪಡೆದು ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ  ಸಿಕ್ಕಿಬಿದ್ದ ಪಿಡಿಓ

Spread the loveಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ