Breaking News

ಬೆಳಗಾವಿ ನದೀಮ ಅವರಿಗೆ ಕಾವ್ಯ ಮಾಣಿಕ್ಯ ಪ್ರಶಸ್ತಿ

Spread the love

ನದೀಮ ಅವರಿಗೆ ಕಾವ್ಯ ಮಾಣಿಕ್ಯ ಪ್ರಶಸ್ತಿ
ಬೆಳಗಾವಿ ೧೯:ಹಾಸನದ ಮಾಣಿಕ್ಯ ಪ್ರಕಾಶನ ನೀಡುವ ಕಾವ್ಯ ಮಾಣಿಕ್ಯರಾಜ್ಯಪ್ರಶಸ್ತಿಗೆ
ಬೆಳಗಾವಿಯ ಯುವ ಕವಿ ನದೀಮ ಸನದಿ ಅವರ ಪ್ರಥಮ ಕೃತಿ ಹುಲಿಯ ನೆತ್ತಿಗೆ ನೆರಳು ಕವನ ಸಂಕಲನ ಆಯ್ಕೆಯಾಗಿದೆ.

ನಿನ್ನೆ ರವಿವಾರ ದಿ.೧೮ ರಂದು ಹಾಸನದ ಸಂಸ್ಕೃತ ಭವನದಲ್ಲಿ ನಡೆದ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಅವರು ನದೀಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ನದೀಮ ಸನದಿ ಬಿ.ಇ, ಎಂ.ಟೆಕ್.ಪದವೀಧರರಾಗಿದ್ದು,ಸಧ್ಯ ಬೆಳಗಾವಿ ಸ್ಮಾರ್ಟ್ ಸಿಟಿ ಯಲ್ಲಿ ಸಹಾಯಕ ಸಿವಿಲ್ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸ್ಮಾರ್ಟ್ ಸಿಟಿಯ ನಿರ್ದೇಶಕ ರಾದ ಶ್ರೀ ಶಶಿಧರ ಕುರೇರ ನದೀಮ್ ಅವರನ್ನು ಅಭಿನಂದಿಸಿದ್ದಾರೆ.


Spread the love

About Laxminews 24x7

Check Also

ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ

Spread the love ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ