Breaking News

ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಬಿಜೆಪಿಗೆ ಆಘಾತ

Spread the love

ಬೆಂಗಳೂರು, ಏಪ್ರಿಲ್‌ 18; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಕೆ ಮಾಡಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಚುನಾವಣಾ ಕಾವು ಏರುತ್ತಿದ್ದಂತೆಯೇ ಹೊರ ಬಂದಿರುವ ಸಮೀಕ್ಷೆಯೊಂದು ಆಡಳಿತ ಪಕ್ಷ ಬಿಜೆಪಿಗೆ ದೊಡ್ಡ ಆಘಾತ ತಂದಿದೆ.

ಕಾಂಗ್ರೆಸ್ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ರಾಜ್ಯದಲ್ಲಿ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

LokPoll ಮಾರ್ಚ್‌ ತಿಂಗಳಿನಲ್ಲಿ ರಾಜ್ಯದಲ್ಲಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಸಮೀಕ್ಷೆಯ ವರದಿ ಪ್ರಕಾರ ಕಾಂಗ್ರೆಸ್ ಪಕ್ಷ 128-131 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ರಾಜ್ಯದಲ್ಲಿ ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 113.

ಸಮೀಕ್ಷೆಯ ಪ್ರಕಾರ ರಾಜ್ಯ ಆಡಳಿತ ಪಕ್ಷಬಿಜೆಪಿ66-69 ಸ್ಥಾನಗಳಲ್ಲಿ ಜಯಗಳಿಸಲಿದೆ. LokPoll ಫೆಬ್ರವರಿ ತಿಂಗಳಿನಲ್ಲಿ ನಡೆಸಿದ್ದ ಸಮೀಕ್ಷೆಯಲ್ಲಿ ಬಿಜೆಪಿ 77-83 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ವರದಿ ಬಂದಿತ್ತು. ಇದಕ್ಕೆ ಹೋಲಿಕೆ ಮಾಡಿದರೆ ಪಕ್ಷ ಮಾರ್ಚ್ ತಿಂಗಳ ಸಮೀಕ್ಷೆಯಲ್ಲಿ ಸ್ಥಾನಗಳನ್ನು ಕಳೆದುಕೊಂಡಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ