Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಬಿಜೆಪಿ ಶಿಸ್ತಿನ ಪಕ್ಷ ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ: ಬಾಲಚಂದ್ರ ಜಾರಕಿಹೊಳಿ

ಬಿಜೆಪಿ ಶಿಸ್ತಿನ ಪಕ್ಷ ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ: ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ : ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.

ಸೋಮವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಹೊಸ ಪದಾಧಿಕಾರಿಗಳು ಸಂಘಟನಾತ್ಮಕವಾಗಿ ದುಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ ಮುಂದಿಡುವಂತೆ ಹೇಳಿದರು.

ಬಿಜೆಪಿ ವಿಶ್ವದಲ್ಲಿಯೇ ಅತೀ ಹೆಚ್ಚು ಸದಸ್ಯರನ್ನು ಹೊಂದಿರುವ ದೊಡ್ಡ ಪಕ್ಷವಾಗಿದೆ. ಈ ಪಕ್ಷವು ಇತರೇ ಪಕ್ಷಗಳಿಗಿಂತ ಭಿನ್ನವಾಗಿದ್ದು, ಕಾರ್ಯಕರ್ತರಿಗೆ ಮನ್ನಣೆ ನೀಡುವ ಏಕೈಕ ಪಕ್ಷವಾಗಿದೆ ಎಂದು ಹೇಳಿದರು.

ಅರಭಾವಿ ಮತಕ್ಷೇತ್ರದಲ್ಲಿ ನಾನು ಹಾಗೂ ಈರಣ್ಣ ಕಡಾಡಿ ಸೇರಿಕೊಂಡು ಅಭಿವೃದ್ಧಿ ಮಾಡುತ್ತೇವೆ. ಇಡೀ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿಯ ಎಲ್ಲ ಜಿಲ್ಲಾ ನಾಯಕರುಗಳು ಕೂಡಿಕೊಂಡು ಪಕ್ಷವನ್ನು ಬಲವರ್ಧನೆ ಮಾಡುತ್ತೇವೆ. ಎಂಎಲ್‍ಸಿ ಆಕಾಂಕ್ಷಿಯಾಗಿದ್ದ ಈರಣ್ಣ ಕಡಾಡಿಯವರಿಗೆ ಕಲ್ಲೋಳಿ ಹನಮಂತ ದೇವರ ಆಶೀರ್ವಾದದಿಂದ ರಾಜ್ಯಸಭೆ ಸದಸ್ಯ ಸ್ಥಾನ ದೊರೆತಿರುವುದು ಕ್ಷೇತ್ರದ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಹೇಳಿದರು. ಕ್ಷೇತ್ರದ ಜನತೆಯ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನಾದ್ಯತೆ ನೀಡುವ ಮೂಲಕ ಸರ್ವಾಂಗೀಣ ಪ್ರಗತಿಗೆ ಎಲ್ಲರೂ ಒಂದಾಗಿ ದುಡಿಯುತ್ತೇವೆ ಎಂದು ತಿಳಿಸಿದರು.


ಕಾರ್ಯಕರ್ತರು ಮತ್ತು ಮತದಾರರಿಗೆ ಗೌರವ ನೀಡುವ ಏಕಮೇವ ಪಕ್ಷ ಬಿಜೆಪಿ : ಈರಣ್ಣ ಕಡಾಡಿ

ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ರೈತಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಮಾತನಾಡಿ, ಜಗತ್ತಿನ ದೊಡ್ಡ ಪಕ್ಷವಾಗಿರುವ ಬಿಜೆಪಿ ತತ್ವಾಧಾರಿತ ಪಕ್ಷವಾಗಿದೆ. ಜೊತೆಗೆ ಮತದಾರರಿಗೂ ಗೌರವ ನೀಡುವ ಪಕ್ಷವಾಗಿದೆ. ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಿಂದ ಭಾರತವು ವಿಶ್ವದಲ್ಲಿಯೇ ಬಲಶಾಲಿ ರಾಷ್ಟ್ರವಾಗಿದೆ. ಮೋದಿಯವರಿಗೆ ಯಾವ ರಾಷ್ಟ್ರ ವೀಸಾ ನೀಡಲಿಕ್ಕೆ ನಿರಾಕರಿಸುತ್ತೋ ಅದೇ ರಾಷ್ಟ್ರ ಇಂದು ಅವರನ್ನು ಹೃದಯಸ್ಪರ್ಶಿಯಾಗಿ ಸ್ವಾಗತ ನೀಡುತ್ತಿರುವುದು ಮೋದಿಯವರ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ಸಾಮಾನ್ಯ ಕಾರ್ಯಕರ್ತನು ಪಕ್ಷದ ಅಧ್ಯಕ್ಷನಾಗಬಹುದು ಎಂಬುದನ್ನು ಜಯಪ್ರಕಾಶ ನಡ್ಡಾ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಿರುವುದು ಉದಾಹರಣೆಯಾಗಿದೆ. ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಸಂಘಟನಾ ಸಾಮಥ್ರ್ಯವನ್ನು ತೋರಬೇಕಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 18 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿಕ್ಕೆ ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗುವಂತೆ ಹೇಳಿದರು.

ಸುರೇಶ ಅಂಗಡಿ ಅವರು ಅಗಲಿರುವುದು ನಮಗೆಲ್ಲ ಅಪಾರ ನೋವಾಗಿದೆ. ಸರಳ ಸಜ್ಜನದ ವ್ಯಕ್ತಿಯಾಗಿದ್ದ ಅಂಗಡಿ ಅವರು ಪಕ್ಷದ ಶಿಸ್ತಿನ ಸಿಪಾಯಿ ಆಗಿದ್ದರು. ಜೊತೆಗೆ ನನಗೆ ಒಳ್ಳೆಯ ಸ್ನೇಹಿತರಾಗಿದ್ದರು. ಡಿಸೆಂಬರ್ ಅಂತ್ಯದೊಳಗೆ ಬೆಳಗಾವಿ ಲೋಕಸಭಾ ಚುನಾವಣೆ ನಡೆಯಬಹುದು. ಈಗಿಂದಲೇ ಕಾರ್ಯಕರ್ತರು ಸನ್ನದ್ಧರಾಗಬೇಕು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಜಯಶಾಲಿಯನ್ನಾಗಿ ಮಾಡುವ ಮೂಲಕ ದಿ. ಸುರೇಶ ಅಂಗಡಿ ಅವರ ಆತ್ಮಕ್ಕೆ ಚಿರಶಾಂತಿ ನೀಡಬೇಕು.                                                               

–ಬಾಲಚಂದ್ರ ಜಾರಕಿಹೊಳಿ, ಶಾಸಕರು.

ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ, ಜಿಲ್ಲಾ ಓಬಿಸಿ ಅಧ್ಯಕ್ಷ ಬಸವರಾಜ ಮಾಳೇದವರ, ಜಿಪಂ ಸದಸ್ಯರಾದ ಗೋವಿಂದ ಕೊಪ್ಪದ, ವಾಸಂತಿ ತೇರದಾಳ, ಮುಖಂಡರಾದ ಬಸವಂತ ಕಮತಿ, ಎಂ.ಕೆ. ಕುಳ್ಳೂರ, ರವಿ ಪರುಶೆಟ್ಟಿ, ಜಿಲ್ಲಾ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ಈರಣ್ಣ ಅಂಗಡಿ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಯುವಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ಓಬಿಸಿ ಮೋರ್ಚಾ ಅಧ್ಯಕ್ಷ ಸಂಗಣ್ಣ ಕಂಠಿಕಾರ, ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ, ಎಸ್‍ಟಿ ಮೋರ್ಚಾ ಅಧ್ಯಕ್ಷ ಯಲ್ಲಾಲಿಂಗ ವಾಳದ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಇಕ್ಬಾಲ್ ಸರ್ಕಾವಸ್, ಜಿಲ್ಲಾ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, ಸೇರಿದಂತೆ ಅರಭಾವಿ ಮಂಡಲ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿಗಳಾದ ಪರಸಪ್ಪ ಬಬಲಿ ಮತ್ತು ಮಹಾಂತೇಶ ಕುಡಚಿ ಜಂಟೀಯಾಗಿ ಕಾರ್ಯಕ್ರಮ ನಿರೂಪಿಸಿದರು.

ಹೊಸದಾಗಿ ನೇಮಕಗೊಂಡ ವಿವಿಧ ಮೋರ್ಚಾಗಳ ಪದಾಧಿಕಾರಿಗಳಿಗೆ ನೇಮಕಾತಿ ಪತ್ರಗಳನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಈರಣ್ಣ ಕಡಾಡಿ ಅವರು ವಿತರಿಸಿದರು.
ಆರಂಭದಲ್ಲಿ ಭಾರತಾಂಬೆ, ಪಂ.ದೀನದಯಾಳ ಉಪಾಧ್ಯಾಯ ಹಾಗೂ ಶ್ಯಾಮ ಪ್ರಸಾದ ಮುಖರ್ಜಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇತ್ತೀಚೆಗೆ ಅಗಲಿದ ಕೇಂದ್ರ ಸಚಿವ ಸುರೇಶ ಅಂಗಡಿ ಮತ್ತು ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅವರ ನಿಧನಕ್ಕೆ ಶೃದ್ಧಾಂಜಲಿ ಸಲ್ಲಿಸಲಾಯಿತು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ