Breaking News
Home / ರಾಜಕೀಯ / ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ದೀಪಕ್‌ ಚಿಂಚೋರೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ದೀಪಕ್‌ ಚಿಂಚೋರೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

Spread the love

ಧಾರವಾಡ, ಏಪ್ರಿಲ್‌, 18: ರಾಜ್ಯ ವಿಧಾನಸಭೆಗೆ ಮೇ 10ರಂದು ಚುನಾಚಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬಿಳಲಿದೆ. ಈ ಹಿನ್ನೆಲೆ ಮಂಗಳವಾರ (ಏಪ್ರಿಲ್‌ 18) ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಗೆಯೇ ತೀವ್ರ ಕುತೂಹಲ ಕೆರಳಿಸಿದ್ದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ದೀಪಕ್‌ ಚಿಂಚೋರೆ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಲಾಗಿದೆ.

 

ಕಾಂಗ್ರೆಸ್‌ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಹಾಲಿಬಿಜೆಪಿಶಾಸಕ ಅರವಿಂದ ಬೆಲ್ಲದ್‌ ಅವರ ವಿರುದ್ಧ ದೀಪಕ್‌ ಚಿಂಚೋರೆ ಅವರನ್ನು ಅಖಾಡಕ್ಕೆ ಇಳಿಸಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಆಕಾಂಕ್ಷಿಗಳ ದಂಡೇ ಹುಟ್ಟಿಕೊಂಡಿತ್ತು. ಕೊನೆಗೆ ದೀಪಕ್‌ ಚಿಂಚೋರೆ ಅವರಿಗೆ ಕಾಂಗ್ರೆಸ್ ಮಣೆ ಹಾಕಿದ್ದು, ಏಪ್ರಿಲ್‌ 20 ರಂದು ಅವರು ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಮಠಕ್ಕೆ ಭೇಟಿ ನೀಡಿದ ಮಹೇಶ್‌ ಟಿಂಗಿನಕಾಯಿ

ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿಯು ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಮಹೇಶ ಟೆಂಗಿನಕಾಯಿ ಅವರಿಗೆ ಟಿಕೆಟ್‌ ನೀಡಿ ಕಣಕ್ಕಿಳಿಸಿದೆ. ಈ ಹಿನ್ನೆಲೆ ಮಹೇಶ್‌ ಟಿಂಗಿನಕಾಯಿ ಅವರು ಹುಬ್ಬಳ್ಳಿಯ ಮೂರು ಸಾವಿರ ಮಠಕ್ಕೆ ಭೇಟಿ ನೀಡಿ ಮನ್ಮಹಾರಾಜ ನಿರಂಜನ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಬಿಜೆಪಿಯಲ್ಲಿ ಭಾರಿ ಬೆಳವಣಿಗೆ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ ಕ್ಷೇತ್ರದಲ್ಲಿ ಅಚ್ಚರಿಯ ಅಭ್ಯರ್ಥಿಯನ್ನ ಬಿಜೆಪಿ ಆಯ್ಕೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆಪ್ತ ಮಹೇಶ್ ಟೆಂಗಿನಕಾಯಿಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ಟಿಕೆಟ್ ನೀಡಿದೆ ಬಿಜೆಪಿ. ಈ ಮೂಲಕ ಜಗದೀಶ್ ಶೆಟ್ಟರ್ ವಿರುದ್ಧ ಕಮಲ ಪಡೆ ನಾಯಕರು ಮತ್ತೊಂದು ಅಸ್ತ್ರ ಪ್ರಯೋಗಿಸಿದ್ದಾರೆ.

ಜಗದೀಶ್ ಶೆಟ್ಟರ್ ಸೋಮವಾತ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ಬಿರುಸಿನ ಬೆಳವಣಿಗೆಗಳು ಬಿಜೆಪಿಯಲ್ಲಿ ನಡೆದಿದ್ದವು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿಗೆ ಪಕ್ಷದಿಂದ ಟಿಕೆಟ್‌ ನೀಡಲು ಸಿದ್ಧತೆ ನಡೆಸಿದ್ದ ರಾಜ್ಯ ನಾಯಕರು, ಈ ಬಗ್ಗೆ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹುಬ್ಬಳ್ಳಿಯ ಆದರ್ಶ ನಗರದ ಮನೆಯಲ್ಲಿ ರಹಸ್ಯ ಸಭೆ ಕೂಡ ನಡೆದಿತ್ತು. ಈ ಚರ್ಚೆಯಲ್ಲಿ ಮಹೇಶ್ ಟೆಂಗಿನಕಾಯಿ ಸಹ ಭಾಗಿಯಾಗಿದ್ದಾರೆ ಎನ್ನಲಾಗಿತ್ತು. ಇಷ್ಟೆಲ್ಲಾ ಊಹಾಪೋಹಗಳ ನಡುವೆ ಬಿಜೆಪಿ ಮಹೇಶ್ ಟೆಂಗಿನಕಾಯಿಗೆ ಟಿಕೆಟ್ ನೀಡಿದೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಜೊತೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಆಪ್ತರೂ ಆಗಿದ್ದಾರೆ.

ಇಷ್ಟೆಲ್ಲಾ ಇದ್ದರೂ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ಕೊಡದೆ, ಮಹೇಶ್ ಟೆಂಗಿನಕಾಯಿ ಅವರನ್ನೇ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವುದು ಬಿಜೆಪಿ ನಾಯಕರಿಗೆ ಕಷ್ಟದ ಕೆಲಸವಾಗಿತ್ತು. ಆದರೆ ಜಗದೀಶ್ ಶೆಟ್ಟರ್‌ ನಿನ್ನೆ ರಾಜೀನಾಮೆ ನೀಡಿದ ಬಳಿಕ ಹಾದಿ ಸುಗಮವಾಗಿ, ಮಹೇಶ್ ಟೆಂಗಿನಕಾಯಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

ಇದೀಗ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಹೇಶ್ ಟೆಂಗಿನಕಾಯಿ ಕೂಡ ಜಗದೀಶ್ ಶೆಟ್ಟರ್ ಅವರ ಸಮುದಾಯಕ್ಕೆ ಸೇರಿದವರು. ಅದರಲ್ಲೂ ಇಬ್ಬರೂ ಲಿಂಗಾಯತ ಬಣಜಿಗ ಸಮುದಾಯಕ್ಕೆ ಸೇರಿದವರು. ಈ ಮೂಲಕ ಲಿಂಗಾಯತ ಸಮುದಾಯದ ಕೋಪಕ್ಕೆ ಗುರಿಯಾಗುವ ಬದಲು, ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಚರ್ಚೆ ಶುರುವಾಗಿದೆ. ಈಗಾಗಲೇ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ಅಲಂಕರಿಸಿರುವ ಮಹೇಶ್ ಟೆಂಗಿನಕಾಯಿಗೆ ತಮ್ಮದೇ ಪಕ್ಷದಿಂದ ಶಾಸಕರಾಗಿ, ಸಿಎಂ ಆಗಿದ್ದ ಜಗದೀಶ್ ಶೆಟ್ಟರ್ ಎದುರಾಳಿ ಆಗಲಿದ್ದಾರೆ.

ದಿಢೀರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆ ಆಗಿರುವುದನ್ನು ನೋಡಿದರೆ, ಶೆಟ್ಟರ್ ಕಾಂಗ್ರೆಸ್ ಸೇರುವ ತನಕ ಬಿಜೆಪಿ ಕಾಯುತ್ತಿತ್ತಾ? ಎಂಬ ಪ್ರಶ್ನೆ ಮೂಡಿದೆ. 2 ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಹೈಕಮಾಂಡ್, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರ ಖಾಲಿ ಬಿಟ್ಟಿತ್ತು. ಇದರಿಂದಾಗಿ ಜಗದೀಶ್ ಶೆಟ್ಟರ್ ಕೋಪಗೊಂಡು ವರಿಷ್ಠರನ್ನ ಪ್ರಶ್ನೆ ಮಾಡಿದ್ದರು. ಟಿಕೆಟ್ ಸಿಗುವುದಿಲ್ಲ ಎಂಬುದು ಕನ್ಫರ್ಮ್ ಆಗುತ್ತಿದ್ದಂತೆ ಶೆಟ್ಟರ್ ಬಿಜೆಪಿ ತೊರೆದು ಇಂದು ಕಾಂಗ್ರೆಸ್ ಸೇರಿದ್ದಾರೆ. ಇತ್ತ ಶೆಟ್ಟರ್ ಕಾಂಗ್ರೆಸ್ ಸೇರುತ್ತಿದ್ದಂತೆ ಬಿಜೆಪಿ ಟೆಂಗಿನಕಾಯಿಗೆ ಟಿಕೆಟ್ ಕನ್ಫರ್ಮ್ ಮಾಡಿದೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ