Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

Spread the love

ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು.

ಬುಧವಾರ ಮುಂಜಾನೆ 11 ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ ಸರಳವಾಗಿ ತಮ್ಮ ನಾಲ್ವರು ಸೂಚಕರೊಂದಿಗೆ ಒಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಭಾಶುಗರ ನಿರ್ದೇಶಕರಾದ ಬಸಗೌಡ ಪಾಟೀಲ, ಕೆಂಚನಗೌಡ ಪಾಟೀಲ, ಜಿಪಂ ಮಾಜಿ ಸದಸ್ಯರಾದ ಡಾ.ರಾಜೇಂದ್ರ ಸಣ್ಣಕ್ಕಿ, ಶಂಕರ ಬಿಲಕುಂದಿ ಅವರು ಉಪಸ್ಥಿತರಿದ್ದರು.

 

 : ಮೂಡಲಗಿ 1 : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ತಹಶೀಲ್ದಾರ ಕಛೇರಿಯಲ್ಲಿ ಬುಧವಾರದಂದು ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಚುನಾವಣಾಧಿಕಾರಿ ಪ್ರಭಾವತಿ ಫಕೀರಪೂರ, ಡಾ.ಸಣ್ಣಕ್ಕಿ, ಬಸಗೌಡ ಪಾಟೀಲ, ಕೆಂಚನಗೌಡ ಪಾಟೀಲ, ಶಂಕರ ಬಿಲಕುಂದಿ ಉಪಸ್ಥಿತರಿದ್ದರು.

ಶಾಸಕ ಬಾಲಚಂದ್ರ ಜಾರಕಿಹೊಳಿ 35.69 ಕೋಟಿ ರೂ. ಆಸ್ತಿ ಒಡೆಯ
ಮೂಡಲಗಿ : ಅರಭಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಸಲ್ಲಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಒಟ್ಟು 35,69,92,186 ರೂ.ಗಳ ಒಡೆಯರಾಗಿದ್ದು, ಇವರ ಹೆಸರಿನಲ್ಲಿ ಯಾವುದೇ ಸಾಲವಿಲ್ಲ.
ಬಾಲಚಂದ್ರ ಜಾರಕಿಹೊಳಿ ಬಳಿ 8,55,777 ರೂ. ನಗದು ಹಣ ಇದೆ. 1.50 ಕೋಟಿ ರೂ.ಗಳ ಎಫ್.ಡಿ ಇದೆ. ಉಳಿತಾಯ ಖಾತೆಗಳಲ್ಲಿ 62,15,688 ರೂ. ಜಮಾ ಇದೆ. 34,45,541 ರೂ ಎನ್‍ಎಸ್‍ಎಸ್ ಪೋಸ್ಟಲ್ ಸೇವಿಂಗ್ಸ್ ಇನ್ಸೂರನ್ಸ್ ಇದ್ದು, 10,97,862 ರೂ. ಮೌಲ್ಯದ ಹುಂಡೈ ಐ20 ಅಸ್ಟಾ ಕಾರ್ ಹೊಂದಿದ್ದಾರೆ. 92,57,810 ರೂ. ಮೌಲ್ಯದ 1510 ಗ್ರಾಂ ಚಿನ್ನವಿದ್ದರೆ, 8,14,100 ರೂ. ಮೌಲ್ಯದ 10 ಕೆಜಿ ಬೆಳ್ಳಿ ಇದೆ. 31,13,85,052 ರೂ. ಮೌಲ್ಯದ ಕೃಷಿ, ಕೃಷಿಯೇತರ ಭೂಮಿ ಹಾಗೂ ವಾಸಿಸುವ ಮನೆ ಸೇರಿದೆ. ಬಾಲಚಂದ್ರ ಜಾರಕಿಹೊಳಿ ಅವರು 1,29,30,703 ರೂ.ಗಳನ್ನು ಬೇರೆಯವರಿಗೆ ಸಾಲವನ್ನಾಗಿ ನೀಡಿದ್ದಾರೆ.

ಕಳೆದ 2018 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ ಆಸ್ತಿ ವಿವರ ಗಮನಿಸಿದರೆ ಈ ಬಾರಿ ಬಾಲಚಂದ್ರ ಜಾರಕಿಹೊಳಿ ಅವರ ಆಸ್ತಿಯಲ್ಲಿ ಏರಿಕೆ ಕಂಡುಬಂದಿದೆ. ಕಳೆದ ಚುನಾವಣೆಯಲ್ಲಿ 19,35,70,979 ರೂ.ಗಳ ಆಸ್ತಿಯನ್ನು ತೋರಿಸಿದ್ದು ಈ ಸಲ 35,69,92,186 ರೂ. ಸಲ್ಲಿಸಿದ್ದಾರೆ. ಚರಾಸ್ತಿ ಮತ್ತು ಸ್ಥಿರಾಸ್ತಿಯಲ್ಲಿ ಯಾವುದೇ ಬದಲಾವಣೆಯಾಗದಿದ್ದರೂ, ಈಗಿನ ಮಾರುಕಟ್ಟೆ ಬೆಲೆ ಹೆಚ್ಚಳವಾಗಿದ್ದರಿಂದ ಇವರ ಆಸ್ತಿ ಮೌಲ್ಯ 16,34,21,207 ರೂ. ಹೆಚ್ಚಳವಾದಂತಾಗಿದೆ.

 


 ಮೂಡಲಗಿ 2 : ಬಾಲಚಂದ್ರ ಜಾರಕಿಹೊಳಿ, ಅಭ್ಯರ್ಥಿ ಬಿಜೆಪಿ.

ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ – ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ
ಮೂಡಲಗಿ: ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೊರಬರುತ್ತಿದ್ದಂತೆಯೇ ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಅವರು ಪರಸ್ಪರ ಕುಶಲೋಪಚಾರಿ ವಿಚಾರಿಸಿದರು.
ಪರಸ್ಪರ ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಭೀಮಪ್ಪ ಗಡಾದ ಅವರು ತಮ್ಮ ರಾಜಕೀಯ ಮರೆತು ಪರಸ್ಪರ ಕೈ ಮುಗಿಯುವ ಮೂಲಕ ಕುಶಲೋಪಚಾರಿ ವಿಚಾರಿಸಿದರು. ನಗುಮುಖದಿಂದಲೇ ಬಾಲಚಂದ್ರ ಜಾರಕಿಹೊಳಿ ಅವರಿಗೆ ಗಡಾದ ಎದುರಾದಾಗ ಆರಾಮರೀ. ನಾವು ಆರಾಮರೀ. ನಮಗೂ ಒಳ್ಳೆಯದಾಗಲಿ. ನಿಮಗೂ ಒಳ್ಳೆಯದಾಗಲಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬಾಲಚಂದ್ರ ಜಾರಕಿಹೊಳಿ ಅವರು ಇದೇ ಸಂದರ್ಭದಲ್ಲಿ ಶುಭ ಹಾರೈಸಿದರು. ಈ ಅಪರೂಪದ ಘಟನೆಗೆ ಶಾಸಕರ ಕಾರ್ಯಕರ್ತರು ಸಾಕ್ಷಿಯಾದರು.

 

 : ಮೂಡಲಗಿ 3 : ಅರಭಾವಿ ಮತಕ್ಷೇತ್ರದ ಚುನಾವಣೆಯಲ್ಲಿ ಪರಸ್ಪರ ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ ಮತ್ತು ಭೀಮಪ್ಪ ಗಡಾದ ಅವರು ಉಭಯ ಕುಶಲೋಪಚಾರಿ ವಿಚಾರಿಸುತ್ತಿರುವುದು.

ನಮ್ಮದು ಏನಿದ್ದರೂ ಅಭಿವೃದ್ಧಿ ಮಾತ್ರ, ವಿರೋಧಿಗಳ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಬಳಿಕ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೇ 10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಯಾರನ್ನೂ ಟೀಕಿಸಿ ಪ್ರಚಾರ ಮಾಡುವುದು ಬೇಡ. ಕೇವಲ ಅಭಿವೃದ್ಧಿಯೊಂದೇ ನಮ್ಮ ಅಝೇಂಡಾ ಆಗಲಿ. ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

 

ಬುಧವಾರದಂದು ತಮ್ಮ ನಾಮಪತ್ರ ಸಲ್ಲಿಸಿದ ಬಳಿಕ ಪಟ್ಟಣದ ಶಿವಬೋಧರಂಗ ಬ್ಯಾಂಕಿನ ಸಭಾಗೃಹದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರ ಆಶೀರ್ವಾದದಿಂದ ಈ ಚುನಾವಣೆಯಲ್ಲಿ ನಮ್ಮ ಗೆಲುವು ಖಚಿತವೆಂದು ತಿಳಿಸಿದರು.

ಬೇಸಿಗೆಯ ಅರ್ಭಟಕ್ಕೆ ಜನರು ಮನೆಯಿಂದ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣದಿಂದ ಜನರಿಗೆ ತೊಂದರೆಯಾಗಬಾರದು ಎನ್ನುವ ಉದ್ಧೇಶದಿಂದ ಇಂದು ಬಿಜೆಪಿಯಿಂದ ನಾಮಪತ್ರವನ್ನು ಸರಳವಾಗಿ ಸಲ್ಲಿಸಿದ್ದೇನೆ. ಕೇವಲ ಸೂಚಕರನ್ನು ಕರೆದುಕೊಂಡು ನಾಮಪತ್ರ ಸಲ್ಲಿಸಿದ್ದೇನೆ. ಎಪ್ರೀಲ್ 21 ರಿಂದ ಅರಭಾವಿ ಕ್ಷೇತ್ರಾಧ್ಯಂತ ಪ್ರಚಾರ ಕಾರ್ಯವನ್ನು ಆರಂಭಿಸಲಾಗುವುದು. ಪ್ರತಿ ಮತಗಟ್ಟೆಗಳಿಂದ ಚುನಾವಣಾ ಪ್ರಚಾರವನ್ನು ನಡೆಸಲು ಉದ್ಧೇಶಿಸಲಾಗಿದೆ ಎಂದು ಹೇಳಿದರು.

ಜನರಿಗೆ ಏನು ಬೇಕು ಅದನ್ನು ನಾವು ಮಾಡೋಣ. ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸೋಣ. ಅದನ್ನು ಬಿಟ್ಟು ವಿರೋಧಿಗಳು ನಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಿದ್ದರೂ ಅವುಗಳಿಗೆ ಪ್ರತಿಕ್ರಿಯೆ ನೀಡಬೇಡಿ. ನಮ್ಮ ಕೆಲಸ ಏನಿದ್ದರೂ ಅದು ಅಭಿವೃದ್ಧಿಯೊಂದೇ. ಅರಭಾವಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಮುಂದೆಯೂ ಸಹ ಜನರ ಆಶೀರ್ವಾದದಿಂದ ಬಿಜೆಪಿ ಮತ್ತೇ ಅಧಿಕಾರಕ್ಕೆ ಬರಲಿದೆ. ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಬೇಸಿಗೆಯ ಬರದಲ್ಲಿ ಜನರಿಗೆ ಕುಡಿಯುವ ನೀರಿನ ಆಹಾಕಾರ ತಪ್ಪಿಸುವ ಉದ್ಧೇಶದಿಂದ ಈಗಾಗಲೇ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ಹಿಡಕಲ್ ಜಲಾಶಯದಿಂದ ನೀರನ್ನು ಹರಿಸುವಂತೆ ಮನವಿ ಮಾಡಿಕೊಂಡಿದ್ದೇನೆ. ಜನರ ಸಮಸ್ಯೆಗಳ ಪರಿಹಾರವೇ ನಮ್ಮ ಮುಖ್ಯ ಧ್ಯೇಯವಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಫೋಟೋ ಕ್ಯಾಪ್ಷನ್ :ಮೂಡಲಗಿ 4 : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದ ಬಳಿಕ ಪಟ್ಟಣದ ಶಿವಬೋಧರಂಗ ಬ್ಯಾಂಕ ಸಭಾಗೃಹದಲ್ಲಿ ಕಾರ್ಯಕರ್ತನ್ನುದ್ಧೇಶಿಸಿ ಮಾತನಾಡಿದರು

 

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ