ನವದೆಹಲಿ: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ.
ಗುರುವಾರ ನಾಮಪತ್ರ ಸಲ್ಲಿಸುವ ಕೊನೆಯ ದಿನ. ಹಾಗಾಗಿ ಬುಧವಾರ ರಾತ್ರಿ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗಕ್ಕೆ ಚನ್ನಬಸಪ್ಪ ಮತ್ತು ಮಾನ್ವಿಗೆ ಮಾಜಿ ಸಂಸದ ಬಿ.ವಿ.ನಾಯಕ ಅವರನ್ನು ಕಣಕ್ಕಿಳಿಸಲಾಗಿದೆ.
ಶಿವಮೊಗ್ಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕ್ಷೇತ್ರ. ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಅವರು ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು.
Laxmi News 24×7