Breaking News

ನೀರಾವರಿ ಯೋಜನೆಗೆ ಮೆಚ್ಚುಗೆ: ಪಾಟೀಲರ ಚುನಾವಣೆ ಖರ್ಚಿಗೆ ₹50 ಸಾವಿರ ನೀಡಿದ ರೈತ!

Spread the love

ವಿಜಯಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಮಾಡಿರುವ ನೀರಾವರಿ ಕೆಲಸಗಳಿಂದ ಸಂತಸನಾದ ರೈತರೊಬ್ಬರು, ಚುನಾವಣೆ ಖರ್ಚಿಗೆ ಕಾಣಿಕೆಯಾಗಿ ₹ 50 ಸಾವಿರ ಚೆಕ್‍ ಅನ್ನು ನೀಡಿ ಅಭಿಮಾನ ತೋರಿದ್ದಾರೆ.

ಬಬಲೇಶ್ವರ ತಾಲ್ಲೂಕಿನ ಸಂಗಾಪುರ ಎಸ್.ಎಚ್. ಗ್ರಾಮದ ರೈತ ಶೇಖಪ್ಪ ಚಿಕ್ಕಗಲಗಲಿ ಅವರು ಎಂ.ಬಿ.ಪಾಟೀಲರ ನಿವಾಸಕ್ಕೆ ರೈತ ಸ್ನೇಹಿತರೊಂದಿಗೆ ಆಗಮಿಸಿ, ಚೆಕ್ ನೀಡಿದರು.

 

ಬಳಿಕ ಮಾತನಾಡಿದ ಶೇಖಪ್ಪ ಚಿಕ್ಕಗಲಗಲಿ, ನಮ್ಮ ಭಾಗದಲ್ಲಿ ಈ ಮುಂಚೆ ಕುಡಿಯುವ ನೀರಿಗೂ ಹಾಹಾಕಾರವಿತ್ತು. ಕೆರೆಗಳಿಗೂ ನೀರು ಸಿಗುತ್ತಿರಲಿಲ್ಲ. ಎಂ.ಬಿ.ಪಾಟೀಲರು ಜಲಸಂಪನ್ಮೂಲ ಸಚಿವರಾದ ನಂತರ ನಮ್ಮ ಭಾಗದಲ್ಲಿ ಸಂಪೂರ್ಣ ನೀರಾವರಿ ಮಾಡಿ ಎಲ್ಲವನ್ನು ಸಮೃದ್ಧಿ ಮಾಡಿದ್ದಾರೆ ಎಂದು ಹೇಳಿದರು.

ಈ ಮುಂಚೆ ಪ್ರತಿ ಎಕರೆ ಭೂಮಿಯ ಬೆಲೆ ₹ 10 ಸಾವಿರ ಮಾತ್ರ ಇತ್ತು. ಈಗ ಪ್ರತಿ ಎಕರೆಗೆ ಕನಿಷ್ಠ ₹ 50 ಸಾವಿರರಂತೆ ಬೆಳೆ ಬೆಳೆಯುತ್ತಿದ್ದೇವೆ. ಎಲ್ಲ ಗ್ರಾಮಗಳು ಶ್ರೀಮಂತವಾಗಿವೆ. ಆರ್ಥಿಕವಾಗಿ ಅಭಿವೃದ್ಧಿಯಾಗಿವೆ. ಪ್ರತಿಯೊಂದು ಊರುಗಳ ಚಿತ್ರಣ ಬದಲಾಗಿದೆ. ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ ಎಂದರು.

ಕ್ಷೇತ್ರದಲ್ಲಿ ಎಂ.ಬಿ.ಪಾಟೀಲರು ಕ್ರಾಂತಿಕಾರಿ ಬದಲಾವಣೆ ಮಾಡಿದಾರೆ. ಇಂಥ ವ್ಯಕ್ತಿಗಳನ್ನು ತಾವೆಲ್ಲರೂ ಬೆಂಬಲಿಸಬೇಕು. ಅವರೊಂದಿಗೆ ಕೈಜೋಡಿಸಬೇಕು ಎಂಬ ಸದುದ್ದೇಶದಿಂದ ಚುನಾವಣೆ ಖರ್ಚಿಗೆ ₹ 50 ಸಾವಿರ ಹಣದ ಚೆಕ್ ನೀಡಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು.

ಗ್ರಾಮದ ಮುಖಂಡರಾದ ದುಂಡಪ್ಪ ಬಡ್ರಿ, ರಮೇಶ ಬಡ್ರಿ, ರಾಜು ಬಡ್ರಿ, ರಮೇಶ ಬರಗಿ ಮತ್ತು ನಂದೆಪ್ಪ ಬಡ್ರಿ ಇದ್ದರು


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ