Breaking News

ಅನಧಿಕೃತ ಶಾಲೆಗಳನ್ನು ಮುಚ್ಚಲು ಮೇ 25ರವರೆಗೆ ಗಡುವು

Spread the love

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದಲ್ಲಿನ ಅನಧಿಕೃತ ಶಾಲೆಗಳನ್ನು ಮುಚ್ಚಲು ಮೇ 25ರವರೆಗೆ ಗಡುವು ನೀಡಿದೆ.

‘ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಶಾಲೆಗಳ ಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಬೇಕು.

ದೂರುಗಳು ಬಂದರೂ, ಕ್ರಮ ಕೈಗೊಳ್ಳದೆ ಸಮಯ ವ್ಯರ್ಥ ಮಾಡಬಾರದು. ಪಟ್ಟಿಯನ್ನು ಒದಗಿಸಿದರೆ ಪೋಷಕರಿಗೂ ಅನುಕೂಲವಾಗುತ್ತದೆ. ಮಕ್ಕಳನ್ನು ಶಾಲೆಗೆ ಸೇರಿಸುವ ಮೊದಲು ಪೋಷಕರು ಶಾಲಾ ಪೂರ್ವಾಪರ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ

(ಕೆಪಿಎಂಟಿಸಿಸಿ) ಶಿಕ್ಷಣ ಇಲಾಖೆಯನ್ನು ಆಗ್ರಹಿಸಿತ್ತು.

‘ತಪಾಸಣೆ ಮಾಡಿದರೆ ಐದು ಸಾವಿರಕ್ಕೂ ಹೆಚ್ಚು ಅನಧಿಕೃತ ಶಾಲೆಗಳು ಸಿಗುತ್ತವೆ. ಆದರೆ, ಶಿಕ್ಷಣ ಇಲಾಖೆಯ ಭ್ರಷ್ಟ ಅಧಿಕಾರಿಗಳೇ ಅನಧಿಕೃತ ಶಾಲೆಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ’ ಎಂದು ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ರುಪ್ಸ) ಆರೋಪಿಸಿತ್ತು.

ಈ ಎಲ್ಲ ಬೆಳವಣಿಗೆಳ ಮಧ್ಯೆ ಶಿಕ್ಷಣ ಇಲಾಖೆ 1,316 ಅನಧಿಕೃತ ಶಾಲೆಗಳನ್ನು ಗುರುತಿಸಿದೆ. ಇನ್ನಷ್ಟು ಶಾಲೆಗಳ ತಪಾಸಣಾ ಕಾರ್ಯ ಮುಂದುವರಿದ್ದು, ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿ, ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಅನಧಿಕೃತ ಶಾಲೆಗಳು 2023-24ರ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನು ದಾಖಲು ಮಾಡಿಕೊಳ್ಳಬಾರದು. ನೋಂದಣಿ ಮಾಡಿಕೊಂಡ ಶಾಲೆಗಳು ಯಾವ ಪಠ್ಯಕ್ರಮದ ಬೋಧನೆಗೆ ಅನುಮತಿ ಪಡೆಯಲಾಗಿದೆಯೋ ಅದೇ ಪಠ್ಯಕ್ರಮ ಬೋಧನೆ ಮಾಡಬೇಕು. ಅನುಮತಿ ಪಡೆದಷ್ಟೇ ಮಾಧ್ಯಮ, ವಿಭಾಗಗಳನ್ನು ನಡೆಸಬೇಕು. ಇಲಾಖೆ ಪೂರ್ವಾನುಮತಿ ಇಲ್ಲದೇ ಶಾಲೆಗಳನ್ನು ಸ್ಥಳಾಂತರ ಮಾಡಬಾರದು. ಕರ್ನಾಟಕ ಪಠ್ಯಪುಸ್ತಕ ಸಂಘ ಸರಬರಾಜು ಮಾಡುವ ಪಠ್ಯಪುಸ್ತಕಗಳನ್ನೇ ಖರೀದಿ ಮಾಡಬೇಕು. ಮೇ 25ರ ನಂತರ ರಾಜ್ಯದಲ್ಲಿ ಅನಧಿಕೃತ ಶಾಲೆಗಳು ಪತ್ತೆಯಾದರೆ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ಎಚ್ಚರಿಸಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ