Breaking News

ಜೆಡಿಎಸ್‌ ಅಭ್ಯರ್ಥಿ ವೈಎಸ್‌ವಿ ದತ್ತ ವಿರುದ್ಧ 41 ಚೆಕ್‌ ಬೌನ್ಸ್‌ ಪ್ರಕರಣ

Spread the love

ಚಿಕ್ಕಮಗಳೂರು: ಕಡೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ವೈಎಸ್‌ವಿ ದತ್ತ ಅವರ ವಿರುದ್ಧ ಚೆಕ್‌ಬೌನ್ಸ್‌ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ.

ಚೆಕ್‌ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ (ಎನ್‌ಐ) ಕಾಯ್ದೆ 1881 ರ ಕಲಂ 138ರ ಅಡಿಯಲ್ಲಿ ದಾಖಲಾಗಿವೆ.

2014ರಿಂದ 2020 ಅವಧಿಯಲ್ಲಿ ಈ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.

ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ ಎಸಿಎಂಎಂ 12, 15,18, 19, 23, 26, 36ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಬೆಂಗಳೂರಿನ ಎಸಿಎಂಎಂ 22 ನೇ ನ್ಯಾಯಾಲಯದಲ್ಲಿ ಮೂರು, 42ನೇ ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ ಎಸ್‌ಸಿಸಿಎಚ್‌ 6ನೇ ಮತ್ತು 8ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಮಂಗಳೂರಿನ ಜೆಂಎಫ್‌ಸಿ ನ್ಯಾಯಾಲಯದಲ್ಲಿ 5 ಮತ್ತು 4ನೇ ಜೆಎಂಎಫ್‌ಸಿಯಲ್ಲಿ 3 ಪ್ರಕರಣ, ಅಥಣಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಎರಡು, ಹಾಸನ ನ್ಯಾಯಾಲಯದಲ್ಲಿ ಎರಡು, ಹಾಸನ ಜಿಲ್ಲೆ ಬೇಲೂರು, ಹುಬ್ಬಳ್ಳಿ, ಗದಗ ನ್ಯಾಯಾಲಯಗಳಲ್ಲಿ ತಲಾ ಒಂದು. ಅನಂತಪುರ ನ್ಯಾಯಾಲಯದಲ್ಲಿ ಒಂದು, ಗುಂತಕಲ್‌ ನ್ಯಾಯಾಲಯದಲ್ಲಿ ಮೂರು ಪ್ರಕರಣ ದಾಖಲಾಗಿವೆ.

ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಈ ಮಾಹಿತಿ ಇದೆ. 2022-23ನೇ ಸಾಲಿನಲ್ಲಿ ಅವರ ವಾರ್ಷಿಕ ಆದಾಯ ₹8.15 ಲಕ್ಷ ಇತ್ತು. ₹17.89 ಲಕ್ಷ ಮೌಲ್ಯದ ಚರಾಸ್ತಿ, ₹2.94 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ ₹93.19 ಲಕ್ಷ ಸಾಲ ಇದೆ.


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಕುರಿತ ಮಹತ್ವದ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು

Spread the loveಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಹಾಗೂ ಸಕ್ಕರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ