Breaking News

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ಜಾಲತಾಣದ ಮಾಹಿತಿಗೆ ಇಲ್ಲಿ ನೋಡಿ

Spread the love

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, ನಾಳೆ(ಏಪ್ರಿಲ್ 21) ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

 

ಫಲಿತಾಂಶ ಘೋಷಣೆ ಸಂಬಂಧ ನಾಳೆ ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದ್ದು, 11 ಗಂಟೆ ನಂತರ https://karresults.nic.in ಜಾಲತಾಣದಲ್ಲಿ ಫಲಿತಾಂಶ ಸಿಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2022-23ನೇ ಶೈಕ್ಷಣಿಕ ಸಾಲಿನಲ್ಲಿ 7,27,387ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ರಾಜ್ಯದ 1,109 ಕೇಂದ್ರಗಳಲ್ಲಿ ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆಗಳು ನಡೆದಿದ್ದವು. ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳ ಮಧ್ಯೆಯೇ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಉಪನ್ಯಾಸಕರನ್ನು ಬಳಸಿಕೊಂಡು ಮೌಲ್ಯಮಾಪನ ಕಾರ್ಯವನ್ನು ಮಂಡಳಿ ಸುಸೂತ್ರವಾಗಿ
ಪೂರ್ಣಗೊಳಿಸಿದೆ.

ಪ್ರತಿ ವಿಷಯದಲ್ಲಿ ಬಹು ಆಯ್ಕೆ ಸೇರಿದಂತೆ ಒಂದು ಅಂಕದ 20 ಪ್ರಶ್ನೆಗಳನ್ನು ಇದೇ ಮೊದಲ ಬಾರಿ ಪರಿಚಯಿಸಲಾಗಿತ್ತು. ರಸಾಯನ ವಿಜ್ಞಾನ ಹೊರತುಪಡಿಸಿ, ಉಳಿದ ಪತ್ರಿಕೆಗಳ ಕುರಿತು ಯಾವುದೇ ತಕರಾರು ಬಂದಿರಲಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ರಸಾಯನ ವಿಜ್ಞಾನ ವಿಷಯದ ಪ್ರಶ್ನೆಗಳು ತೊಡಕಾಗಿವೆ. ಸಿಬಿಎಸ್‌ಸಿ, ಐಸಿಎಸ್‌ಸಿ ಮಾದರಿ ಯಲ್ಲಿ ಪ್ರಶ್ನೆಗಳಿವೆ ಎಂದು ಕೆಲವರು ಮಂಡಳಿಗೆ ದೂರು ಸಲ್ಲಿಸಿದ್ದರು.


Spread the love

About Laxminews 24x7

Check Also

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!

Spread the love ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ! ಸಚಿವ ಶರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ