Breaking News

ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಈ ಮೂರು ದಿನ ಸಿಗಲ್ಲ ‘ಎಣ್ಣೆ

Spread the love

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಮೇ.10ರಂದು ಮತದಾನ ನಡೆಯಲಿದೆ. ಮೇ.13ರಂದು ಮತಏಣಿಕೆ ನಡೆದು(Voting ), ಫಲಿತಾಂಶ ( Election Results ) ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ ( Ban on sale of liquor ).

 

ಈ ಕುರಿತಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಮತದಾನದ ಪ್ರಯುಕ್ತ ದಿನಾಂಕ 08-05-2023ರ ಸಂಜೆ 5 ಗಂಟೆಯಿಂದ, 10-05-2023ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಏಣಿಕೆ ಪ್ರಯುಕ್ತ ದಿನಾಂಕ 13-05-2023ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12ಗಂಟೆಯವೆರೆಗ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಮತದಾನ ಮತ್ತು ಮತಏಣಿಕೆಯ ಸಂದರ್ಭದಲ್ಲಿ ಮದ್ಯದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮಾರಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಿ, ಶುಷ್ಕ ದಿನ ( Dry Day) ಎಂದು ಘೋಷಿಸಿ ಆದೇಶಿಸಿದೆ. ಈ ದಿನಗಳಂದು ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ತರಹದ ಮಧ್ಯದ ತಯಾರಿಕೆ, ದಾಸ್ತಾನು, ಸಾಗಾಣಿಕೆ ಮತ್ತು ಮದ್ಯ ಮಾರಾಟವನ್ನು ( Sale of liquor ) ನಿಷೇಧಿಸಲಾಗಿದೆ ಎಂದಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ


Spread the love

About Laxminews 24x7

Check Also

ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು….

Spread the love ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು…. ಅದ್ದೂರಿ ಗಣೇಶೋತ್ಸವಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ