Breaking News

ಹೊಲಕ್ಕೆ ಹೊರಟಿದ್ದ ರೈತರ ಮೇಲೆ‌ ಅಪರಿಚಿತ ವಾಹನ ಹರಿದು ಇಬ್ಬರು ರೈತರ ದುರ್ಮರಣ: ಇಬ್ಬರಿಗೆ ಗಾಯ

Spread the love

ಖಾನಾಪುರ: ತಾಲೂಕಿನ ಗೋಧೋಳಿ ಗ್ರಾಮದ ಹೊರವಲಯದ ಧಾರವಾಡ ರಾಮನಗರ ರಾಜ್ಯ ಹೆದ್ದಾರಿಯ ಮೇಲೆ ತಮ್ಮ ಹೊಲಕ್ಕೆ ಹೊರಟಿದ್ದ ನಾಲ್ವರು ರೈತರ ಮೇಲೆ ಅಪರಿಚಿತ ವಾಹನ ಹರಿದ‌ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಮಧ್ಯರಾತ್ರಿ ಸಂಭವಿಸಿದೆ.

ಗೊಧೋಳಿಯ ನಾಲ್ವರು ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಕಬ್ಬಿಗೆ ನೀರು ಹಾಯಿಸಲು ಹೊರಟಿದ್ದರು. ಗ್ರಾಮದ ಹೊರವಲಯದಲ್ಲಿ ನಡೆದುಕೊಂಡು ಹೊಲದ ಕಡೆ ಹೊರಟಿದ್ದ ವೇಳೆ ಅಪರಿಚಿತ ವಾಹನವೊಂದು ಹಿಂಬದಿಯಿಂದ ಇವರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರ ಗಾಯ, ಓರ್ವನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತದ ಸುದ್ದಿ ತಿಳಿದ ಕೂಡಲೇ ಮಾಜಿ ಶಾಸಕ ಅರವಿಂದ ಪಾಟೀಲ ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ಮತ್ತು ಮೃತರ ದೇಹಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಖಾನಾಪುರ ಸರಕಾರಿ ಆಸ್ಪತ್ರೆಗೆ ತೆರಳಿ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಸಹಕರಿಸಿದರು. 

ಅಪಘಾತದಲ್ಲಿ ಮೃತರನ್ನು ಗೊಧೋಳಿ ಗ್ರಾಮದ ಮಹಾಬಲೇಶ್ವರ ಶಿಂಧೆ (ವಯಸ್ಸು 65) ಮತ್ತು ಪುಂಡಲೀಕ ರೇಡೇಕರ (ವಯಸ್ಸು 72) ಎಂದು ಗುರುತಿಸಲಾಗಿದೆ. ಪುಂಡಲೀಕ ಅವರ ಹಿರಿಯ ಸಹೋದರ ಕೃಷ್ಣ ರೇಡೇಕರ (74)  ಗಂಭೀರವಾಗಿ ಗಾಯಗೊಂಡು ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೋರ್ವ ಗಾಯಾಳು ಮಂಜುನಾಥ ಕಾಗಿನಕರ (47) ಅಲ್ಪಪ್ರಮಾಣದ ಗಾಯಗಳಿಂದ ಬಳಲುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಂದಗಡ ಠಾಣೆಯ ಪೊಲೀಸರು ಘಟನಾ‌ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ