Breaking News

ಧಾರವಾಡ ಪ್ರವೇಶ ನಿರ್ಬಂಧ: ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

Spread the love

ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆ 50 ದಿನಗಳ ಕಾಲ ಧಾರವಾಡದಲ್ಲಿರಲು ಅನುಮತಿ ನೀಡು­ವಂತೆ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ. ಬೆಂಗಳೂರು: ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆ 50 ದಿನಗಳ ಕಾಲ ಧಾರವಾಡದಲ್ಲಿರಲು ಅನುಮತಿ ನೀಡು­ವಂತೆ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ.

30 ದಿನಗಳ ಕಾಲ ಧಾರವಾಡದಲ್ಲಿ ನೆಲೆಸಲು ಅನುಮತಿಸುವಂತೆ ಮತ್ತು ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ವಹಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ವಿನಯ್ ಕುಲಕರ್ಣಿಯವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು. ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ ಎಚ್ ಜಾಧವ್ ಅವರು “ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶ ನಿರ್ಬಂಧಿಸಿದೆ” ಎಂದರು. ಆಗ ಪೀಠವು “(ಧಾರವಾಡ) ಪ್ರವೇಶ ನಿರ್ಬಂಧಿಸಿರುವವರು ಯಾರು?” ಎಂದಿತು.

ಆಗ ಜಾಧವ್ ಅವರು “ಸುಪ್ರೀಂ ಕೋರ್ಟ್” ಎಂದರು. ಇದಕ್ಕೆ ಪೀಠವು “ಸುಪ್ರೀಂ ಕೋರ್ಟ್ ತಾನೆ, ಅಲ್ಲಿಗೆ ಹೋಗಿ. ವಿಚಾರಣಾಧೀನ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ನಮಗಲ್ಲ.

ಈ ಮಧ್ಯೆ, ನಾವೇನೂ ಮಾಡಲಾಗದು. ನೀವುಂಟು, ಸುಪ್ರೀಂ ಕೋರ್ಟ್ ಉಂಟು ಮತ್ತು ವಿಚಾರಣಾಧೀನ ನ್ಯಾಯಾಲಯ ಉಂಟು. ಸುಪ್ರೀಂ ಕೋರ್ಟ್ ಆದೇಶ ಮಾಡಿರುವುದರಿಂದ ನೀವು ಅಲ್ಲಿಯೇ ಪ್ರಶ್ನಿಸಬೇಕು” ಎಂದು ಮೌಖಿಕವಾಗಿ ಹೇಳಿತು. ಅಂತಿಮವಾಗಿ ಪೀಠವು ಎರಡು ಅರ್ಜಿಗಳಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿ ಮಾಡಿತು.

ಪ್ರಕರಣದ ವಿಚಾರಣೆ ಶುಕ್ರವಾರ, ಏ.21ರಂದು ನಡೆಯಲಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 15ನೇ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಲಯದ ಅನುಮತಿ ಪಡಯದೇ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬುದು ಸೇರಿ ನಾಲ್ಕು ಷರತ್ತುಗಳನ್ನು ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡುವಾಗ ಸುಪ್ರೀಂ ಕೋರ್ಟ್ ವಿಧಿಸಿತ್ತು. ಈಗ ಚುನಾವಣೆಯ ಹಿನ್ನೆಲೆಯಲ್ಲಿ ಅಭ್ಯರ್ಥಿಯಾಗಿರುವುದರಿಂದ ಧಾರವಾಡ ಪ್ರವೇಶಿಸಲು ವಿನಯ್ ಕುಲಕರ್ಣಿ ನ್ಯಾಯಾಲಯದ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಧಾರವಾಡದಲ್ಲಿರಲು 50 ದಿನ ಅನುಮತಿ ಕೋರಿದ್ದ ವಿನಯ್ ಕುಲಕರ್ಣಿ ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಚೆಗೆ ತಿರಸ್ಕರಿಸಿತ್ತು. ಹೀಗಾಗಿ, ವಿನಯ್ ಕುಲಕರ್ಣಿ ಹೈಕೋರ್ಟ್ ಕದತಟ್ಟಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ