ಇದು 223 ಕೋಟಿ ಹಣ ರೂ. ಮೊತ್ತದ ಯೋಜನೆಯಾಗಿದ್ದು, ಈ ಹಣ ಎಲ್ಲಿಗೆ ಹೋಗಿದೆ ಎಂಬ ಬಗ್ಗೆ ತನಖೆಯಾಗಬೇಕು. ಚುನಾವಣಾ ಆಯೋಗ ಈ ಬಗ್ಗೆ ನಿಗಾ ವಹಿಸಬೇಕು ಎಂದು ಆಗ್ರಹಿಸಿದರು. “ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಜಾತಿಗೆ ಸೇರಿದ ಪ್ರಹ್ಲಾದ್ ಜೋಷಿ ಮುಖ್ಯಮಂತ್ರಿಯಾಗಬಹುದು ಎಂದು ಜೆಡಿಎಸ್ ಪಕ್ಷದ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಈಗ, ಬಿ.ಎಲ್.ಸಂತೋಷ್ರವರು ಏಳೆಂಟು ಅಭ್ಯರ್ಥಿಗಳನ್ನು ಬದಲಿಸಿ ಸಿಎಂ ಆಗಲು ಮುಂದಾಗಿದ್ದಾರೆ ಎಂದು ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು ಪ್ರಹ್ಲಾದ್ ಜೋಷಿ ಹಾಗೂ ಬಿ.ಎಲ್.ಸಂತೋಷ್ ನಡುವೆ ಪೈಪೋಟಿಯಿರುತ್ತದೆ ಎನ್ನುವುದು ಇದರಿಂದ ಸಾಬೀತಾಗಿದೆ ಎಂದು ಹೇಳಿದರು
ಆದ್ದರಿಂದ ನಾವು ಈ ವಿಷಯವನ್ನು ಜನರ ಮುಂದಿಡುತ್ತಿದ್ದೇವೆಂದು ತಿಳಿಸಿದರು. ಆಮ್ ಆದ್ಮಿ ಪಕ್ಷ ಯಾವುದೇ ಒಂದು ಜಾತಿ ಅಥವಾ ಧರ್ಮಕ್ಕೆ ಸಿಮೀತವಾದ ಪಕ್ಷವಲ್ಲ. ಇಲ್ಲಿ ಎಲ್ಲರಿಗೂ ಸಮಾನ ಅವಕಾಶಗಳಿವೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೆ ಗೆಲ್ಲಲು ಪ್ರಬಲ ಜಾತಿಗಳ ಮೊರೆ ಹೋಗಿದ್ದು, ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಉಳಿಸಿಕೊಂಡಿಲ್ಲ ಎಂದು ಬ್ರಿಜೇಶ್ ಕಾಳಪ್ಪ ಇದೇ ವೇಳೆ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಮಾಧ್ಯಮ ವಕ್ತಾರರಾದ ಉಷಾ ಮೋಹನ್ ಉಪಸ್ಥಿತರಿದ್ದರು. ಆಪ್ ಆರೋಪ ಸಂಬಂಧ ಬಿಬಿಎಂಪಿ ಸಾರ್ವಜನಿಕ ಸಂಪರ್ಕ ಅಧಿಕಾರಿಯನ್ನು ಸಂಪರ್ಕಿಸಲಾಯಿತು. ಆದರೆ, ಅವರು ಪ್ರತಿಕ್ರಿಯೆ ನೀಡಲು ನಿರಾಕರಿಸಿ ಸಂಬಂಧಿಸಿದ ಇಲಾಖೆಯನ್ನು ಸಂಪರ್ಕಿಸುವಂತೆ ತಿಳಿಸಿದರು. ಈ ನಡುವೆ ಬಿಬಿಎಂಪಿ ಮುಖ್ಯ ಲೆಕ್ಕಾಧಿಕಾರಿ ವಾಣಿ ನಿಂಗಪ್ಪ ಕೂಡ ಪ್ರತಿಕ್ರಿಯಿಸಲು ಸಂಪರ್ಕಕ್ಕೆ ಸಿಗಲಿಲ್ಲ.