ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬೆಂಗಳೂರು: ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ಶಾಸಕರ ಪುತ್ರ ಮಾಡಾಳ್ ಪ್ರಶಾಂತ್ ಅವರನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್ಡಿಎಲ್) ಕಚೇರಿಯಲ್ಲಿ ತಂದೆಯ ಪರವಾಗಿ 40 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಮಾರ್ಚ್ 2 ರಂದು ಬಂಧಿಸಿದ್ದರು. ಪ್ರಶಾಂತ್ ಮಾಡಾಳ್ ಬಂಧನದ ನಂತರ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆ ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ 8.23 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಕೆಎಸ್ಡಿಎಲ್ ಅಧ್ಯಕ್ಷರೂ ಆಗಿದ್ದ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧವೂ ಪ್ರಕರಣ ದಾಖಲಿಸಲಾಗಿತ್ತು.