Breaking News

ಕೋರ್ಟ್ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಶುಕ್ರವಾರ ಗುಂಡಿನ ದಾಳಿ ನಡೆದಿದೆ.

Spread the love

ಹೊಸದಿಲ್ಲಿ: ದೆಹಲಿಯ ಸಾಕೇತ್ ಕೋರ್ಟ್ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಶುಕ್ರವಾರ ಗುಂಡಿನ ದಾಳಿ ನಡೆದಿದೆ.

ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗೆ ಆಗಮಿಸಿದ್ದ ಮಹಿಳೆ ಮೇಲೆ ವಕಿಲರ ದಿರಿಸಿನಲ್ಲಿ ಬಂದ ವ್ಯಕ್ತಿಯೊಬ್ಬ ನಾಲ್ಕು ಸುತ್ತು ಗುಂಡು ಹಾರಿಸಿದ್ದಾನೆ. ಅಪಾರ ಸಂಖ್ಯೆಯಲ್ಲಿದ್ದ ವಕಿಲರು, ಕಕ್ಷಿದಾರರ ಸಮ್ಮುಖದಲ್ಲೇ ಈ ಘಟನೆ ನಡೆದಿದೆ.

ಹೊಟ್ಟೆಗೆ ಗುಂಡು ತಗುಲಿ ನರಳುತ್ತಿದ್ದ ಮಹಿಳೆಯನ್ನು ಕೋರ್ಟ್ ಆವರಣದಲ್ಲಿದ್ದ ಜನರು ಹಾಗೂ ಪೊಲೀಸರು ಸೇರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸಾಗಿಸಿದರು. ಕೌಟುಂಬಿಕ ಕಲಹ ಈ ಘಟನೆಗೆ ಕಾರಣ ಎನ್ನಲಾಗಿದೆ.

ಸಾಕೇತ್ ಕೋರ್ಟ್ ನಲ್ಲಿ ಈ ಹಿಂದೆಯೂ ಗುಂಡಿನ ದಾಳಿ ಪ್ರಕರಣಗಳು ನಡೆದಿದ್ದು ಅಲ್ಲಿನ ಭದ್ರತೆ ಹೆಚ್ಚಿಸಬೇಕೆಂಬ ಆಗ್ರಹಗಳು ಕೇಳಿಬಂದಿವೆ. ಇದೇ ವೇಳೆ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಜ್ಯದ ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ