Breaking News

ಅಕ್ರಮವಾಗಿ ಸಾಗಾಟವಾಗುತ್ತಿದ್ದ6.93 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ, ಪೂಜಾ ಪರಿಕರಗಳು ವಶ

Spread the love

ಹಾವೇರಿ: ನಗರ ಹೊರವಲಯದ ಅಜ್ಜಯ್ಯನ ಪ್ರದೇಶದ ಬಳಿ ಇರುವ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಆಭರಣಗಳು, ಪೂಜಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹುಬ್ಬಳ್ಳಿಯಿಂದ ದಾವಣಗೆರೆಯತ್ತ ಸಾಗುತ್ತಿದ್ದ ವಾಹನ ತಡೆದು ಪರಿಶೀಲಿಸಿದಾಗ 11 ಕೆಜಿ ಚಿನ್ನ, 74 ಕೆಜಿ ಬೆಳ್ಳಿ ಹಾಗೂ ತಟ್ಟೆ, ಲೋಟ, ಪೂಜಾ ಪರಿಕರಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಇವುಗಳ ಮೊತ್ತ 6.93 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇವುಗಳ ಸಾಗಾಟ ಮಾಡುತ್ತಿದ್ದವರು ಯಾವುದೇ ಪರವಾನಗಿ ಪಡೆದಿರಲಿಲ್ಲ ಎನ್ನಲಾಗಿದೆ.

ತಹಸೀಲ್ದಾರ್ ಗಿರೀಶ ಸ್ವಾದಿ ನೇತೃತ್ವದಲ್ಲಿ ಎಲ್ಲ ವಸ್ತುಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ