Breaking News

ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ತಿರಸ್ಕೃತವಾಗುತ್ತಾ?

Spread the love

ಸವದತ್ತಿ: ಸವದತ್ತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ತಿರಸ್ಕೃತವಾಗುತ್ತಾ? ಅಂತಹ ಚರ್ಚೆ ಕ್ಷೇತ್ರದಲ್ಲಿ ಜೋರಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ ಮತ್ತು ಆಪ್ ಅಭ್ಯರ್ಥಿ ಬಾಪುಗೌಡ ಎನ್ನುವವರು ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಇಂತಹ ಆತಂಕ ಮತ್ತು ಚರ್ಚೆ ನಡೆಯುತ್ತಿದೆ. ರತ್ನಾ ಮಾಮನಿ ನಾಮಪತ್ರ ಸಲ್ಲಿಸುವಾಗ 2018ರ ಅಫಿಡವಿಟ್ ನ್ನು ಸಲ್ಲಿಸಿದ್ದಾರೆ. ಹಾಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ದೂರುದಾರರು ಕೋರಿದ್ದರು.

ಈ ಕುರಿತು ವಿಚಾರಣೆಯನ್ನು ಶನಿವಾರ ಬೆಳಗ್ಗೆ 10 ಗಂಟೆಗೆ ಇಟ್ಟುಕೊಳ್ಳಲಾಗಿದೆ. ವಿಚಾರಣೆಯ ನಂತರ ನಾಮಪತ್ರ ಸ್ವೀಕರಿಸಬೇಕೋ, ತಿರಸ್ಕರಿಸಬೇಕೋ ಎನ್ನುವ ತೀರ್ಮಾನವನ್ನು ಚುನಾವಣಾಧಿಕಾರಿಗಳು ಕೈಗೊಳ್ಳಲಿದ್ದಾರೆ.

ಮಾಹಿತಿಯ ಪ್ರಕಾರ ನಾಳೆ ವಿಚಾರಣೆ ಆರಂಭವಾಗುವವರೆಗೂ ಅವರು ಹೊಸದಾದ ಅಫಿಡವಿಟ್ ಅಪ್ ಲೋಡ್ ಮಾಡಲು ಅವಕಾಶವಿದೆ. ಹಾಗಾಗಿ ಅಂತಹ ಆತಂಕವೇನೂ ಇಲ್ಲ.


Spread the love

About Laxminews 24x7

Check Also

ಮಣ್ಣಿನ ಆರೋಗ್ಯ ಮತ್ತುನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಸಿಎಂಸಿದ್ದರಾಮಯ್ಯ ಚಾಲನೆ

Spread the loveಬೆಳಗಾವಿ: ನಮ್ಮದು ರೈತ ಪರ ಸರ್ಕಾರ. ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ