ಕರ್ನಾಟಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಪಕ್ಷ ಬರಲಿದೆ. ರಾಜ್ಯದ ಜನರು ಮತ್ತೆ ಭಾರತೀಯ ಜನತಾ ಪಾರ್ಟಿಗೆ ಮತ ನೀಡಿ ಗೆಲ್ಲಿಸಲಿದ್ದಾರೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದ್ದಾರೆ.
ಶಂಕರ ಪಾಟೀಲ ಮುನೇನಕೊಪ್ಪಹುಬ್ಬಳ್ಳಿ: ಬಿಜೆಪಿಯಿಂದ ಈ ಬಾರಿ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುವಂತೆ ಕೇಂದ್ರ ಹಾಗೂ ರಾಜ್ಯದ ವರಿಷ್ಠರ ಮೇಲೆ ಒತ್ತಡ ಹೇರುತ್ತೇವೆ.
ಹೀಗಾಗಿ ಮತದಾರರು ಲಿಂಗಾಯತ ನಾಯಕರನ್ನು ಹಚ್ಚೆಚ್ಚು ಆಯ್ಕೆ ಮಾಡಬೇಕು ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ನವರು ಲಿಂಗಾಯತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎನ್ನುವುದು ಅಪ್ರಸ್ತುತ.
ಈ ಹಿಂದೆ ಕಾಂಗ್ರೆಸ್ನವರು ಲಿಂಗಾಯತ ನಾಯಕರಾದ ವೀರೇಂದ್ರ ಪಾಟೀಲ್ ಅವರನ್ನು ನಡೆಸಿಕೊಂಡ ರೀತಿ ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ನವರು ಬಿಜೆಪಿ ಲಿಂಗಾಯತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಹೇಳುತ್ತಾ ಅಹಿಂದ ಸಿದ್ಧಾಂತವನ್ನು ಕೈಗೊಂಡು, ಅಹಿಂದ ವರ್ಗದವರಿಗೂ ಯಾವುದೇ ಯೋಜನೆ ನೀಡದೇ ಮತ್ತು ಮತ ಬ್ಯಾಂಕ್ಗಾಗಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುತ್ತಾ ಬಂದಿದ್ದಾರೆ ಎಂದು ಹರಿಹಾಯ್ದರು.