Breaking News

ನಾನು ಸಿಎಂ ಆದ್ರೆ ಮುಸ್ಲಿಮರಿಗೆ ಮೀಸಲಾತಿ, ರಾಜ್ಯದಲ್ಲಿ ಅಮುಲ್ ಹಾಲು ಮಾರಾಟಕ್ಕೆ ಕಡಿವಾಣ : ಸಿದ್ದರಾಮಯ್ಯ ಘೋಷಣೆ

Spread the love

ಬೆಂಗಳೂರು : ರಾಜ್ಯದಲ್ಲಿ ಮತ್ತೆ ನಾನು ಸಿಎಂ ಆದರೆ ಮುಸ್ಲಿಮರಿಗೆ ಶೇ 4 ರಷ್ಟು ಮೀಸಲಾತಿ ನೀಡುತ್ತೇನೆ, ರಾಜ್ಯದಲ್ಲಿ ಅಮುಲ್ ಹಾಲು ಖರೀದಿಸದಂತೆ ಆದೇಶಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಬಿಜೆಪಿ ಸರ್ಕಾರ ಮುಸ್ಲಿರ ಮೀಸಲಾತಿಯನ್ನು ರದ್ದುಗೊಳಿಸಿ ಅದನ್ನು ಒಕ್ಕಲಿಗರು ಹಾಗೂ ಲಿಂಗಾಯತರಿಗೆ ನೀಡಿದೆ.

ರಾಜ್ಯದಲ್ಲಿ ಮತ್ತೆ ನಾನು ಸಿಎಂ ಆದರೆ ಮುಸ್ಲಿಮರಿಗೆ ಶೇ 4 ರಷ್ಟು ಮೀಸಲಾತಿ ನೀಡುತ್ತೇನೆ, ರಾಜ್ಯದಲ್ಲಿ ಅಮುಲ್ ಹಾಲು ಖರೀದಿಸದಂತೆ ಆದೇಶಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಅಮುಲ್ ಪ್ರವೇಶದಿಂದ ನಂದಿನಿ ಉತ್ಪನ್ನಗಳಿಗೆ ತೊಂದರೆಯಾಗುತ್ತಿದೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ನಾನು ರಾಜ್ಯಕ್ಕೆ ಅಮುಲ್ ಪ್ರವೇಶವನ್ನು ವಿರೋಧಿಸುತ್ತೇನೆ, ನಾನು ಸಿಎಂ ಆದರೆ ರಾಜ್ಯದಲ್ಲಿ ಅಮುಲ್ ಹಾಲು ಖರೀದಿಸದಂತೆ ಆದೇಶಿಸುತ್ತೇನೆ , ಸಿಎಂ ಆದರೆ ಅಮುಲ್ ಹಾಲು ಖರೀದಿಸಬೇಡಿ ಎಂದು ಮನವಿ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ‘HDK’ ಇಂದು ಸಂಜೆ ಡಿಸ್ಚಾರ್ಜ್ ಸಾಧ್ಯತೆ

ಬೆಂಗಳೂರು: ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಅವರಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಸಂಜೆ ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು, ಎಲ್ಲಾ ಚುನಾವಣಾ ಪ್ರಚಾರಗಳನ್ನು ಮುಂದೂಡಿದ್ದಾರೆ. ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ( Fever ) ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮಾಡಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ( Karnataka Assembly Election Campaign ) ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ