ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ.
ಇದೀಗ ಸಿಎಂ ಬೊಮ್ಮಾಯಿಗೂ ಚುನಾವಣಾ ನೀತಿ ಸಂಹಿತೆ ಬಿಸಿ ತಟ್ಟಿದ್ದು, ದೊಡ್ಡಬಳ್ಳಾಪುರದ ಚೆಕ್ ಪೋಸ್ಟ್ ನಲ್ಲಿ ಸಿಎಂ ಕಾರು ತಪಾಸಣೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಸಿಎಂ ಕಾರು ತಡೆದು ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ.ಸಿಎಂ ಬೊಮ್ಮಾಯಿ ಬಾಶೆಟ್ಟರಹಳ್ಳಿಗೆ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ಪ್ರಚಾರ ನಡೆಸಲಿದ್ದಾರೆ.
ರಾಹುಲ್ ಗಾಂಧಿಗೆ ತಟ್ಟಿದ ನೀತಿ ಸಂಹಿತೆ ಬಿಸಿ : ಕೂಡಲ ಸಂಗಮದಲ್ಲಿ ಹೆಲಿಕಾಪ್ಟರ್ ತಪಾಸಣೆ
ಬಾಗಲಕೋಟೆ : ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ( Rahul Gandhi ) ಹುಬ್ಬಳ್ಳಿ ಏರ್ ಪೋರ್ಟ್ ಗೆ ಆಗಮಿಸಿ ಬಳಿಕ ಕೂಡಲಸಂಗಮಕ್ಕೆ ಆಗಮಿಸಿದ್ದಾರೆ.ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಹುನಗುಂದ ತಾಲೂಕಿನ ಕೂಡಲ ಸಂಗಮದಲ್ಲಿ ಚುನಾವಣಾಧಿಕಾರಿಗಳು ರಾಹುಲ್ ಗಾಂಧಿ ಹೆಲಿಕಾಪ್ಟರ್ ತಪಾಸಣೆ ನಡೆಸಿದಾರೆ. ಬಸವಜಯಂತಿಯಂದೇ ರಾಹುಲ್ ಗಾಂಧಿ ಕೂಡಲಸಂಗಮಕ್ಕೆ ಆಗಮಿಸಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಗೆ ಜಗದೀಶ್ ಶೆಟ್ಟರ್ ಸ್ವಾಗತ ಕೋರಿದರು. ಈ ವೇಳೆ ಹಲವು ಕಾಂಗ್ರೆಸ್ ನಾಯಕರು ಸಾತ್ ನೀಡಿದರು. ಕರ್ನಾಟಕ ಚುನಾವಣೆಯ ( Karnataka Assembly Election 2023 ) ಹೊತ್ತಿನಲ್ಲಿ ರಾಜ್ಯಕ್ಕೆ ಸ್ಟಾರ್ ಪ್ರಚಾರಕರ ಆರ್ಭಟ ಹೆಚ್ಚಾಗಿದೆ. ಈಗಾಗಲೇ ಬಿಜೆಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ( Congress Leader Rahul Gandhi ) ಇಂದು ಕರ್ನಾಟಕಕ್ಕೆ ಆಗಮಿಸಲಿದ್ದು, ರಾಜ್ಯದ 5 ಜಿಲ್ಲೆಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.