ಬೆಂಗಳೂರು : ಚುನಾವಣೆ ಹೊತ್ತಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಮತ್ತು ದಾವಣಗೆರೆ ಎಸ್ಪಿ ರಿಷ್ಯಾಂತ್ ವರ್ಗಾವಣೆ ಮಾಡಲಾಗಿದೆ.
ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿ. ಅರೂಣ್ ಕೆ ದಾವಣಗೆರೆ ನೂತನ ಡಿಸಿಪಿಯಾಗಿ ನೇಮಕವಾಗಿದ್ದಾರೆ.
ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ : ಹುಬ್ಬಳ್ಳಿಯಲ್ಲಿ ಸ್ವಾಗತ ಕೋರಿದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ : ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ( Rahul Gandhi ) ಇದೀಗ ಹುಬ್ಬಳ್ಳಿ ಏರ್ ಪೋರ್ಟ್ ಗೆ ಆಗಮಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಗೆ ಜಗದೀಶ್ ಶೆಟ್ಟರ್ ಸ್ವಾಗತ ಕೋರಿದರು. ಈ ವೇಳೆ ಹಲವು ಕಾಂಗ್ರೆಸ್ ನಾಯಕರು ಸಾತ್ ನೀಡಿದರು. ಹುಬ್ಬಳ್ಳಿಯಿಂದ ರಾಹುಲ್ ಗಾಂಧಿ ಕೂಡಲಸಂಗಮಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
ಕರ್ನಾಟಕ ಚುನಾವಣೆಯ ( Karnataka Assembly Election 2023 ) ಹೊತ್ತಿನಲ್ಲಿ ರಾಜ್ಯಕ್ಕೆ ಸ್ಟಾರ್ ಪ್ರಚಾರಕರ ಆರ್ಭಟ ಹೆಚ್ಚಾಗಿದೆ. ಈಗಾಗಲೇ ಬಿಜೆಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ( Congress Leader Rahul Gandhi ) ಇಂದು ಕರ್ನಾಟಕಕ್ಕೆ ಆಗಮಿಸಲಿದ್ದು, ರಾಜ್ಯದ 5 ಜಿಲ್ಲೆಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.
ಎರಡು ದಿನಗಳಲ್ಲಿ ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ ಸೇರಿದಂತೆ ಐದು ಜಿಲ್ಲೆಗಳಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಅಲ್ಲಿಂದ ಕೂಡಲ ಸಂಗಮಕ್ಕೆ ತೆರಳುವಂತ ಅವರು, ಸಂಗಮನಾಥನ ದೇವಾಲಯ ಮತ್ತು ಐಕ್ಯ ಲಿಂಗದ ದರ್ಶನವನ್ನು ಪಡೆಯಲಿದ್ದಾರೆ ಎಂದು ತಿಳಿಸಿದೆ..ಏ.24ರಂದು ಸೋಮವಾರ ಮಧ್ಯಾಹ್ನ 2 ಗಂಟೆಗೆ ಬೆಳಗಾವಿಯ ರಾಮದುರ್ಗದಲ್ಲಿ ಕಬ್ಬು ಬೆಳೆಗಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 3.30 ಗಂಟೆಗೆ ಗದಗದಲ್ಲಿ ಯುವ ಸಂವಾದದಲ್ಲಿ ಭಾಗವಹಿಸಿ ಯುವಕರೊಂದಿಗೆ ಸಂವಾದದಲ್ಲಿ ತೊಡಗಲಿದ್ದಾರೆ.