Breaking News

ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ವೈದ್ಯ

Spread the love

ಬೆಂಗಳೂರು : ಬೆಂಗಳೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯರಾಗಿದ್ದ ವೈದ್ಯರೊಬ್ಬರು ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ರೇಣುಕಾನಂದ (43) ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿನ ವಾರ್ಡ್ ನಲ್ಲಿ ಇದ್ದ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ವಿಷಯವನ್ನು ಆಸ್ಪತ್ರೆಯ ಸಿಬ್ಬಂದಿ ತಿಲಕ್ ನಗರ ಠಾಣೆಯ ಪೊಲೀಸರಿಗೆ ನೀಡಿದ್ದು, ಸ್ಥಳಕ್ಕಾಗಮಿಸಿ್ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ