ಗೋಕಾಕ: ಗೋಕಾಕ ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ.
ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಚಂದನಕುಮಾರ ಗಿಡ್ನವರ್ ಹಾಗೂ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಪ್ರಕಾಶ ಮಹಾದೇವ ಭಾಗೋಜಿ ನಾಮಪತ್ರ ವಾಪಸ್ ಪಡೆದಿದ್ದಾರೆ.
ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಸೋಮವಾರ ಅವರು ಚುನಾವಣಾಧಿಕಾರಿಗೆ ನಾಮಪತ್ರ ವಾಪಸ್ ಪಡೆಯುವ ಪತ್ರ ಸಲ್ಲಿಸಿದ್ದಾರೆ.
ಇದರಿಂದಾಗಿ ಗೋಕಾಕ ಕ್ಷೇತ್ರ ಮತ್ತಷ್ಟು ಕುತೂಹಲಕರ ಕಣವಾಗಿ ಮಾರ್ಪಟ್ಟಿದೆ. ಬಿಜೆಪಿಯ ರಮೇಶ ಜಾರಕಿಹೊಳಿ ಮತ್ತು ಕಾಂಗ್ರೆಸ್ ನ ಮಹಾಂತೇಶ ಕಡಾಡಿ ಮಧ್ಯೆ ತೀವ್ರ ಹಣಾಹಣಿ ನಡೆಯುವ ನಿರೀಕ್ಷೆ ಇದೆ.
Laxmi News 24×7