Breaking News

ಕಣ್ಮುಚ್ಚಿ ಕುಳಿತ ಅಧಿಕಾರಿಗಳು : ತುಮ್ಮರಗುದ್ದಿಯಲ್ಲಿ ರಾರಾಜಿಸುತ್ತಿದೆ ಹೆಬ್ಬಾಳ್ಕರ್ ಭಾವಚಿತ್ರ !

Spread the love

ಬೆಳಗಾವಿ :ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇದೀಗ ತುಸು ಜೋರಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಬಿಗು ಚುನಾವಣೆ ನೀತಿ ಸಂಹಿತೆಯನ್ನು ಜಾರಿಗೊಳಿಸಿದೆ. ಆದರೆ ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಚುನಾವಣೆಯ ನೀತಿ ಸಂಹಿತೆ ಅನ್ವಯವಾಗುವುದಿಲ್ಲವೋ ಎಂಬ ಪ್ರಶ್ನೆ ಮೂಡಿದೆ.

ಯಾಕೆಂದರೆ ಲೋಕೋಪಯೋಗಿ ಇಲಾಖೆ ವತಿಯಿಂದ ತುಮ್ಮರಗುದ್ದಿ ಗ್ರಾಮದಲ್ಲಿ ಕೈಗೊಂಡಿರುವ ಕಾಮಗಾರಿಯ ಒಟ್ಟು ಖರ್ಚು ವೆಚ್ಚ ಕುರಿತ ಬೃಹತ್ ಫಲಕ ಇನ್ನೂ ತೆರವುಗೊಳಿಸಿಲ್ಲ. ಈ ಫಲಕದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರ ದೊಡ್ಡದಾಗಿ ರಾರಾಜಿಸುತ್ತಿದೆ. ಇದನ್ನು ತೆರವುಗೊಳಿಸುವಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಇರುವುದಕ್ಕೆ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ರಸ್ತೆಯ ಸನಿಹದಲ್ಲೇ ಇಷ್ಟೊಂದು ದೊಡ್ಡ ಗಾತ್ರದ ಫಲಕ ಹಾಕಲಾಗಿದೆ. ಇದನ್ನು ಉದ್ದೇಶಪೂರ್ವಕವಾಗಿ ಹಾಗೆಯೇ ಉಳಿಸಿಕೊಳ್ಳಲಾಗಿದೆಯೋ ಎನ್ನುವುದು ಬಿಜೆಪಿ ಕಾರ್ಯಕರ್ತರ ಪ್ರಶ್ನೆಯಾಗಿದೆ. ಚುನಾವಣಾ ಆಯೋಗ ಈ ನಿಟ್ಟಿನಲ್ಲಿ ತಕ್ಷಣ ಗಮನಹರಿಸಬೇಕು ಎನ್ನುವುದು ಬಿಜೆಪಿಯ ಆಗ್ರಹವಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ