ತುಮಕೂರು: ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರಿತ್ತಿದ್ದು,ಪಕ್ಷೇತರ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ತುರುವೆಕೆರೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಾರಾಯಣ ಅಲಿಯಾಸ್ ಕರಿಯಾನನ್ನು ಕೊಲೆ ಪ್ರಕರಣದಡಿ ಪೊಲೀಸರು ಬಂಧಿಸಿದ್ದಾರೆ.
ಲಗ್ಗೆರೆಯಲ್ಲಿ ಕೊಡವತ್ತಿ ಮೂಲದ ಭೂಮಿಕಾ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ ಚೇತನ್ ಎಂಬಾತನ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ನಾರಾಯಣ ಎ6 ಆರೋಪಿಯಾಗಿದ್ದ. ಭೂಮಿಕಾ ಸಹೋದರ ಮತ್ತು ಇತರರು ಸೇರಿ ಚೇತನ್ ನನ್ನು 2021ರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.
Laxmi News 24×7