Breaking News

ಸಂಸತ್ತಿನಲ್ಲಿ ನನಗೆ ಕಣ್ಣೀರು ಹಾಕಿಸಿದ ವ್ಯಕ್ತಿಗೆ ನಾನು ಕಣ್ಣೀರು ತರಿಸಬೇಕು

Spread the love

ತುಮಕೂರು: ಸಂಸತ್ತಿನಲ್ಲಿ ಕಣ್ಣೀರು ಹಾಕಿಸಿದ ನಾಯಕನಿಗೆ ಕಣ್ಣೀರು ತರಿಸಿದರಷ್ಟೇ ತನ್ನ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಹೇಳಿದರು.

ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ಅವರು, ನಾನು ಹಿಂದೆ ನಡೆದಿದ್ದನ್ನು ಮೆಲುಕು ಹಾಕಿ ನೋಡಲೂ ಹೋಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದುಕೊಂಡಿರಲಿಲ್ಲ. ಚುನಾವಣಾ ರಾಜಕೀಯ ಸಾಕಾಗಿದೆ ಅಂತಾ ಹಿಂದೆಯೇ ಹೇಳಿದ್ದೆ. ತುಮಕೂರಿನ ಕೆಲವು ಮುಖಂಡರು ನನ್ನನ್ನು ಬಲಿಪಶು ಮಾಡಿದ್ರು ಅಂತಾ ಹೇಳಲ್ಲ.

ಅವರ ಹೆಸರು ಕೂಡ ಹೇಳೋಕೆ ಹೋಗಲ್ಲ. ಆದರೆ ಸಂಸತ್ತಿನಲ್ಲಿ ನಿಂತು ಕಣ್ಣೀರು ಹಾಕುವ ಕೆಟ್ಟ ಸಂದರ್ಭ ತಂದರು. ಆ ನಾಯಕನ ಕಣ್ಣಲ್ಲಿ ನೀರು ತರಿಸಬೇಕು, ಆಗ ನನ್ನ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದರು.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ