Breaking News

ಸಂಜೆ 6 ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ: ನರೇಂದ್ರ ಮೋದಿ

Spread the love

ಹೊಸದಿಲ್ಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನರೇಂದ್ರ ಮೋದಿ ಭಾಷಣ ದೇಶಾದ್ಯಂತ ಕುತೂಹವನ್ನು ಮೂಡಿಸಿದೆ.

ಮಂಗಳವಾರ ಮಧ್ಯಾಹ್ನ ನರೇಂದ್ರ ಮೋದಿ ಈ ಕುರಿತು ಟ್ವೀಟ್ ಮಾಡಿದ್ದಾರೆ. ಸಂಜೆ 6 ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ ಎಂದು ಹೇಳಿದ್ದಾರೆ. ನವರಾತ್ರಿಯ ಸಂದರ್ಭದಲ್ಲಿ ಮೋದಿ ಭಾಷಣ ಮಾಡುತ್ತಿದ್ದಾರೆ.

ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಬಳಿಕ ಅನ್ ಲಾಕ್ 3.0 ಜಾರಿಗೆ ಬಂದ ಬಳಿಕ ಅವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿಲ್ಲ. ಆದ್ದರಿಂದ, ಇಂದಿನ ಭಾಷಣ ಕುತೂಹಲಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರ, ತೆಲಂಗಾಣ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಈ ಹಿನ್ನಲೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆಯೇ? ಎಂಬುದು ಕುತೂಹಲ ಮೂಡಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ