Breaking News

ಬಂಡಾಯ ಅಭ್ಯರ್ಥಿ ಕಾಲಿಗೆ ನಮಸ್ಕರಿಸಿದ ಬಿಜೆಪಿ ಅಭ್ಯರ್ಥಿ

Spread the love

ಗದಗ: ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಹಾಲಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿ, ಸೋಮವಾರ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.

ನಾಮಪತ್ರ ಹಿಂಪಡೆಯುತ್ತಿದ್ದಂತೆ ಅವರ ನಿವಾಸಕ್ಕೆ ಆಗಮಿಸಿದ ಶಿರಹಟ್ಟಿ ವಿಧಾನಸಭಾ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದ್ರು ಲಮಾಣಿ ಧನ್ಯವಾದ ಹೇಳುವ ಮೂಲಕ, ರಾಮಣ್ಣ ಲಮಾಣಿ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.

ರಾಮಣ್ಣ ಲಮಾಣಿ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಆದಿಯಾಗಿ ಜಿಲ್ಲಾ ನಾಯಕರಿಂದ ಮನವೊಲಿಕೆ ಮಾಡಿದ ಬಳಿಕ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿದ್ದ ಬಂಡಾಯ ಇದೀಗ ಶಮನಗೊಂಡಂತಾಗಿದೆ. ಚಂದ್ರು ಲಮಾಣಿ ಅವರಿಗೆ ಟಿಕೆಟ್ ಸಿಕ್ಕಿದೆ. ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ದೊಡ್ಡ ಮಟ್ಟದಲ್ಲಿ ಗೆಲವು ಸಾಧಿಸಿದ್ದೆ. ಈಗ ಕಾಂಗ್ರೆಸ್ ಪಕ್ಷದಲ್ಲಿ ಎರಡು ಬಣಗಳಾಗಿವೆ. ನೀನು ಕೂಡ ದೊಡ್ಡ ಮಟ್ಟದಲ್ಲಿ ಗೆದ್ದು ಬಾ ಎಂದು ಚಂದ್ರು ಲಮಾಣಿಗೆ ರಾಮಣ್ಣ ಲಮಾಣಿ ಆಶೀರ್ವದಿಸಿದರು.


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ