Breaking News

ನಾಳೆ ಬಿಜೆಪಿ ಅಭ್ಯರ್ಥಿಗಳ ಪರ ಕಿಚ್ಚ ಸುದೀಪ್ ಪ್ರಚಾರ: ಐದು ಕ್ಷೇತ್ರಗಳಲ್ಲಿ ಹೆಬ್ಬುಲಿ ರೋಡ್ ಶೋ

Spread the love

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗು ಅವರು ಸೂಚಿಸುವ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕಾರ್ಯ ನಡೆಸುವುದಾಗಿ ಪ್ರಕಟಿಸಿರುವ ನಟ ಕಿಚ್ಚ ಸುದೀಪ್ ನಾಳೆ ಅಧಿಕೃತವಾಗಿ ಸಿಎಂ ಸೂಚಿಸಿರುವ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ವೇಳೆ ಸಾಂಕೇತಿಕವಾಗಿ ಭಾಗಿಯಾಗಿ ಬೆಂಬಲ ಸೂಚಿಸಿ ಪ್ರಚಾರ ನಡೆಸಿದ್ದ ಸುದೀಪ್ ನಾಳೆಯಿಂದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ನಟ ಕಿಚ್ಚ ಸುದೀಪ್ ಪ್ರಚಾರ ಕಾರ್ಯದ ವಿವರವನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯಂತೆ ಒಂದು ದಿನದ ಪ್ರಚಾರ ಕಾರ್ಯದ ವಿವರಗಳನ್ನು ಬಹಿರಂಪಡಿಸಲಾಗಿದೆ. ನಾಳೆ ಮೊಳಕಾಲ್ಮೂರಿನ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ರೋಡ್ ಶೋ ಮೂಲಕ ಮತಯಾಚನೆ ಮಾಡಲಿರುವ ಸುದೀಪ್, ಜಗಳೂರು ಬಿಜೆಪಿ ಅಭ್ಯರ್ಥಿ ಪರ ಸುದೀಪ್ ಪ್ರಚಾರ ನಡೆಸಿ, ಮಾಯಕೊಂಡ ಬಿಜೆಪಿ ಅಭ್ಯರ್ಥಿ ಪರ ಮತ ಯಾಚಿಸಲಿದ್ದಾರೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ ಅಭ್ಯರ್ಥಿಗಳ ಪರ ಪ್ರಚಾರದ ಬಳಿಕ ಸಂಡೂರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯ ನಡೆಸಲಿದ್ದಾರೆ. ನಾಳೆ ಒಂದೇ ದಿನದಲ್ಲಿ ಒಟ್ಟು ಐದು ಕಡೆ ರೋಡ್ ಶೋ ಮೂಲಕ ಕ್ಯಾಂಪೇನ್ ಮಾಡಲಿದ್ದಾರೆ.

ಬುಧವಾರ ಬೆಳಗ್ಗೆ 10.55 ರಿಂದ 11.40 ರವರೆಗೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಟ ಸುದೀಪ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಪರ ಮತ ಯಾಚನೆ ಮಾಡಲಿದ್ದಾರೆ. ನಂತರ ದಾವಣಗೆರೆ ಜಿಲ್ಲೆ ಜಗಳೂರಿಗೆ ತೆರಳಲಿರುವ ಅವರು ಮಧ್ಯಾಹ್ನ 12.30 ರಿಂದ 1.15 ರವರೆಗೆ ಮೂರು ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ ರಾಘವೇಂದ್ರ ಪರ ಮತಯಾಚನೆ ಮಾಡಲಿದ್ದಾರೆ.

ನಂತರ ಮಾಯಕೊಂಡ ಕ್ಷೇತ್ರಕ್ಕೆ ತೆರಳಲಿರುವ ಸುದೀಪ್ ಮಾಯಕೊಂಡ ಸರ್ಕಾರಿ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ 3.10 ರಿಂದ 3.50ರವರೆಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಿಜೆಪಿ ಅಭ್ಯರ್ಥಿ ಬಸವರಾಜ ನಾಯ್ಕ್ ಪರ ಪ್ರಚಾರ ನಡೆಸಲಿದ್ದಾರೆ. ನಂತರ ದಾವಣಗೆರೆಗೆ ತೆರಳಲಿರುವ ಸುದೀಪ್ ಸಂಜೆ 4.20 ರಿಂದ 5 ಗಂಟೆವರೆಗೆ ರೋಡ್ ಶೋ ನಡೆಸಲಿದ್ದಾರೆ. ದಾವಣಗೆರೆ ಉತ್ತರ ಕ್ಷೇತ್ರದ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಬಿ ಜಿ ಅಜಯ್ ಕುಮಾರ್ ಪರ ಮತ ಯಾಚಿಸಲಿದ್ದಾರೆ. ದಾವಣಗೆರೆ ಪ್ರಚಾರ ಮುಗಿಸಿ ವಿಜಯನಗರ ಜಿಲ್ಲೆಗೆ ತೆರಳಲಿರುವ ಹೆಬ್ಬುಲಿ ಸುದೀಪ್​, ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ರೋಡ್ ಶೋ ನಡೆಸಿ ಪಕ್ಷದ ಅಭ್ಯರ್ಥಿ ಶಿಲ್ಪ ರಾಘವೇಂದ್ರ ಪರ ಮತಬೇಟೆ ನಡೆಸಲಿದ್ದಾರೆ.

ಪಕ್ಷದ ವತಿಯಿಂದ ನಟ ಕಿಚ್ಚ ಸುದೀಪ್ ಗೆ ಹೆಲಿಕಾಪ್ಟರ್ ವ್ಯವಸ್ಥೆ ಕಲ್ಪಿಸಲಾಗಿದೆ. ಖಾಸಗಿ ಹೆಲಿಕಾಪ್ಟರ್ ಬುಕ್ ಮಾಡಿರುವ ಬಿಜೆಪಿ ಇಡೀ ದಿನ ಸುದೀಪ್ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದೆ. ನಾಳೆಯಿಂದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸಲಿರುವ ಸುದೀಪ್ ಅವರು ಸಿಎಂ ತಿಳಿಸುವ ಇತರ ಅಭ್ಯರ್ಥಿಗಳ ಪರವೂ ಪ್ರಚಾರ ಮುಂದುವರೆಸಲಿದ್ದಾರೆ. ಅವರ ಮುಂದುವರೆದ ಪ್ರಚಾರದ ವಿವರಗಳನ್ನು ನಂತರ ನೀಡುವುದಾಗಿ ಸಿಎಂ ಆಪ್ತರು ತಿಳಿಸಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ