Breaking News

ಜಿಲ್ಲೆಯಲ್ಲಿ 14 ಸಾವಿರ ರೈತರಿಗೆ 6.40 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಲಾಗಿರುತ್ತದೆ:ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

Spread the love

ಬೆಳಗಾವಿ: ಜಿಲ್ಲೆಯಲ್ಲಿ 14 ಸಾವಿರ ರೈತರಿಗೆ 6.40 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಪ್ರಗತಿ ಪರಿಶೀನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ  ಇದುವರೆಗೆ ಅತಿವೃಷ್ಟಿಯಿಂದ 4 ಜನರು 13 ಜಾನುವಾರಗಳ ಜೀವಹಾನಿಯಾಗಿದ್ದು, ಸಂಬಂಧಿಸಿದ ಕುಟುಂಬದವರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ.

ಜಿಲ್ಲೆಯಲ್ಲಿ ಪೂರ್ಣ ಹಾಗೂ ಭಾಗಶಃ ಸೇರಿದಂತೆ ಒಟ್ಟಾರೆ 4619 ಮನೆಗಳ ಹಾನಿಯಾಗಿದೆ. ಅದೇ ರೀತಿ
1.66 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು, ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ ಎಂದರು.

ಕೋವಿಡ್-೧೯ ಪರಿಸ್ಥಿತಿ ಕೂಡ ಕ್ರಮೇಣ ನಿಯಂತ್ರಣಕ್ಕೆ ಬಂದಿದ್ದು, ಆಕ್ಸಿಜನ್ ಬೇಡಿಕೆ ಇಳಿಮುಖವಾಗಿದೆ ಎಂದು ತಿಳಿಸಿದರು.

ಎಲ್ಲ ಹದಿನಾಲ್ಕು ತಾಲ್ಲೂಕುಗಳಲ್ಲಿ ಪವಿತ್ರ ವನ ನಿರ್ಮಾಣಕ್ಕೆ ಐದು ಎಕರೆ ಜಮೀನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ