Breaking News

BJPಗೆ 140ಕ್ಕೂ ಹೆಚ್ಚು ಸ್ಥಾನ ಖಚಿತ: ಬಿಎಸ್‌ವೈ

Spread the love

ಗಳೂರು: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಪಟ್ಟಣದ ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಬಿಜೆಪಿ ಅಭ್ಯರ್ಥಿ ಎಸ್‌.ವಿ. ರಾಮಚಂದ್ರ ಪರ ರೋಡ್‌ ಶೋ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿ ಸಾಮೂಹಿಕ ನಾಯಕತ್ವದ ಮುಂದೆ ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಯ ಚುನಾವಣ ರಣತಂತ್ರ ಏನೂ ನಡೆಯದು.

ದೇಶದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಮತ್ತೂಮ್ಮೆ ಆಡಳಿತಕ್ಕೆ ಬರುತ್ತದೆ.

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಜಗಳೂರು ಕ್ಷೇತ್ರವನ್ನು ಅಭಿವೃದ್ಧಿಪಡಿಸಿರುವ ಶಾಸಕ ಎಸ್‌.ವಿ. ರಾಮಚಂದ್ರ ಈ ಬಾರಿ ಐವತ್ತು ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಬಿರು ಬಿಸಿಲನ್ನೂ ಲೆಕ್ಕಿಸದೆ ರೋಡ್‌ ಶೋನಲ್ಲಿ ಭಾಗವಹಿಸಿರುವ ಕಾರ್ಯಕರ್ತರ ಉತ್ಸಾಹವೇ ಇದಕ್ಕೆ ಸಾಕ್ಷಿ ಎಂದರು.


Spread the love

About Laxminews 24x7

Check Also

ಕಬ್ಬು ಬೆಳೆಗಾರರ ಹೋರಾಟ ಯಾವಾಗ ಬೇಕಾದರೂ ಹೆಚ್ಚಾಗಬಹುದು

Spread the loveಕಬ್ಬು ಬೆಳೆಗಾರರ ಹೋರಾಟ ಯಾವಾಗ ಬೇಕಾದರೂ ಹೆಚ್ಚಾಗಬಹುದು ಹುಬ್ಬಳ್ಳಿ: “ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು ತಾತ್ಕಾಲಿಕವಾಗಿ ಮಾತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ