ಬೆಳಗಾವಿ: ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಇಂದು ಅಪರೂಪದ ವಿದ್ಯಮಾನ ನಡೆದಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಪರಸ್ಪರ ಮುಖಾಮುಖಿಯಾದ ಸಂದರ್ಭಕ್ಕೆ ಏರ್ ಪೋರ್ಟ್ ಸಾಕ್ಷಿಯಯೈತು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದು, ಈ ವೇಳೆ ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ ಅವರ ಬೆನ್ನು ತಟ್ಟಿದ್ದಾರೆ.ಬಳಿಕ ಇಬ್ಬರೂ ನಗು ನಗುತ್ತಲೇ ಮಾತನಾಡಿ, ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿದರು.
ಲಿಂಗಾಯಿತ ಸಮರದ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಪರಸ್ಪರ ಮುಖಾಮುಖಿ ಭೇಟಿಗೆ ಸಾಂಬ್ರಾ ವಿಮಾನ ನಿಲ್ದಾಣ ಸಾಕ್ಷಿಯಾಯಿತು.
Laxmi News 24×7