Breaking News

ಕಾಂಗ್ರೆಸ್ ಕಾರ್ಯಕರ್ತರಿಗೂ ಜನಸೇವೆಯ ಅವಕಾಶ ನೀಡುವಂತೆ ಸಿಎಂಗೆ ಡಿಕೆಶಿ ಪತ್ರ

Spread the love

ಬೆಂಗಳೂರು: ಕೊರೋನಾ ಮಹಾಮಾರಿ ಎದುರಿಸುವಲ್ಲಿ ಸಾರ್ವಜನಿಕರಿಗೆ ನೆರವಾಗಲು ಕಾಂಗ್ರೆಸ್ ಕಾರ್ಯಕರ್ತರಿಗೂ ಅವಕಾಶ ನೀಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೋನಾ ನಿರ್ವಹಣೆಗೆ ಬಿಜೆಪಿ ಕಾರ್ಯಕರ್ತರನ್ನು (ಕೊರೊನಾ ವಾರಿಯರ್ಸ್) ಬಳಸಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅವರು ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಸಿಎಂಗೆ ಪತ್ರ ಬರೆದಿರುವ ಶಿವಕುಮಾರ್, ಹೇಳಿರುವುದಿಷ್ಟು:

ಜನಸೇವೆ ವಿಚಾರದಲ್ಲಿ ನಮ್ಮ ಪಕ್ಷ ಯಾವಾಗಲೂ ಮುಂಚೂಣಿಯಲ್ಲಿರುತ್ತದೆ. ಕೋವಿಡ್ ಸಂತ್ರಸ್ತರ ನೆರವಿಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಕ ಜಿಲ್ಲಾ, ತಾಲೂಕು ಹಾಗೂ ಪಂಚಾಯಿತಿ ಮಟ್ಟದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಹಗಲಿರುಳು ದುಡಿದು, ತನು ಮನ ಧನ ಸಹಾಯ ಮಾಡುತ್ತಿದ್ದಾರೆ.

ನಮ್ಮ ಪಕ್ಷದ ಕಾರ್ಯಕರ್ತರು ಸ್ವಯಂ ಸೇವಕರಾಗಿ ಕೆಲಸ ಮಾಡಲು ಸದಾ ಸನ್ನದ್ಧರಾಗಿದ್ದು, ಜನಸೇವೆಗೆ ಲಭ್ಯರಿದ್ದಾರೆ. ಹೀಗಾಗಿ ಸರ್ಕಾರ ಅಧಿಕೃತವಾಗಿ ನಮ್ಮ ಕಾರ್ಯಕರ್ತರಿಗೂ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಲು ಅವಕಾಶ ನೀಡಬೇಕು.’


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ