Breaking News

ಸಚಿವ ರಮೇಶ ಜಾರಕಿಹೊಳಿ ಅವರಿಗೆ ಡಿಸಿಎಂ ಸ್ಥಾನ ,ನೀಡಬೇಕೆಂದು  ಭಾರತೀಯ ದಲಿತ  ಪ್ಯಾಂಥರ್ ಸಂಘದ ಜಿಲ್ಲಾಧ್ಯಕ್ಷ ಡಾ. ಮಹಾಲಿಂಗಪ್ಪ ಕೋಲಕಾರ ಆಗ್ರಹಿಸಿದ್ದಾರೆ.

Spread the love

ಬೆಳಗಾವಿ : ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಡಿಸಿಎಂ ಸ್ಥಾನ , ಹಾವೇರಿ ಜಿಲ್ಲೆಯ ನೆಹರು ಓಲೆಕಾರ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು  ಭಾರತೀಯ ದಲಿತ  ಪ್ಯಾಂಥರ್ ಸಂಘದ ಜಿಲ್ಲಾಧ್ಯಕ್ಷ ಡಾ. ಮಹಾಲಿಂಗಪ್ಪ ಕೋಲಕಾರ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಪ್ರಮುಖ ಪಾತ್ರವಿದೆ. ಅಂತಹ ಪ್ರಭಾವಿ ನಾಯಕರಿಗೆ ಈಗ ಸಿಎಂ ಬಿಎಸ್ ಯಡಿಯೂರಪ್ಪನವರು ಜಲಸಂಪನ್ಮೂಲ ಸಚಿವ ಸ್ಥಾನ ನೀಡಲಾಗಿದೆ. ಸ್ವಾಗತಾರ್ಹವಾಗಿದೆ. ಅದರ ಜತೆಗೆ ಉಪಮುಖ್ಯಮಂತ್ರಿ ಸ್ಥಾನವನ್ನೂ ನೀಡಬೇಕು ಎಂದು ಒತ್ತಾಯಿಸಿದರು.

ಹಾವೇರಿ ಜಿಲ್ಲೆಯ ಶಾಸಕ ನೆಹರು ಓಲೆಕಾರ ಅವರಿಗೆ ಸಚಿವ ಸಂಪುಟ ದರ್ಜೆ ಸಚಿವ ಸ್ಥಾನ ಬೇಡಬೇಕು. ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಪರಿಶಿಷ್ಟ ಜಾತಿಯಲ್ಲಿ ನಮ್ಮ‌ ಸಮುದಾಯದ ಜನರ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಆದ  ಕಾರಣ  ಛಲವಾದಿ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿಯನ್ನು ಸ್ಥಾಪನೆ ಮಾಡಬೇಕು ಎಂದು  ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

ರಾಜ್ಯ ಸರ್ಕಾರದ ಬಜೆಟ್ ನಲ್ಲಿ ನಮ್ಮ ಸಮುದಾಯಕ್ಕೆ ಯುವಕರು ಉದ್ಯೋಗ ಮಾಡಿಕೊಳ್ಳಲು  2 ಲಕ್ಷ ಕೋಟಿ ಅನುದಾನವನ್ನು ಮೀಸಲಿಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ದುರ್ಗೇಶ ಮೈತ್ರಿ, ಸಾಯಿನಾಥ ಕೋಲಕಾರ, ಕವಿತಾ ಕೋಲಕಾರ ಇತರರು ಇದ್ದರು.


Spread the love

About Laxminews 24x7

Check Also

ಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ

Spread the loveಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ : ಹುಕ್ಕೇರಿ ವಿದ್ಯುತ್ ಸಂಘದ ಚುನಾವಣೆ ಹಾಗೂ ಡಿಸಿಸಿ ಬ್ಯಾಂಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ