ಜಗದೀಶ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ವಿರೋಧ ಪಕ್ಷದಲ್ಲಿರುವುದರಿಂದ ಅವರನ್ನು ಸೋಲಿಸುವುದು ಅವಶ್ಯಕ ಹಾಗೂ ಅನಿವಾರ್ಯ ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಅವರು ಹೇಳಿದರು.
ಕೇಂದ್ರ ಸಚಿವ ಶ್ರೀಪಾದ ನಾಯ್ಕಕಾರವಾರ (ಉತ್ತರ ಕನ್ನಡ) : ಪ್ರಧಾನಿ ನರೇಂದ್ರ ಮೋದಿ ಮೇ 3 ರಂದು ಜಿಲ್ಲೆಗೆ ಆಗಮಿಸುವುದು ಬಹುತೇಕ ಖಚಿತವಾಗಿದ್ದು, ಸಮಾವೇಶಕ್ಕೆ 3 ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆ ಇದೆ ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಹೇಳಿದರು.
ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಬುಧವಾರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಜಿಲ್ಲೆ ಭೇಟಿ ಬಳಿಕ ಚುನಾವಣಾ ಚಿತ್ರಣ ಬದಲಾಗಲಿದೆ. ಇದರಿಂದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಉತ್ಸಾಹ ಹೆಚ್ಚಾಗಲಿದೆ ಎಂದರು.
ಅಂಕೋಲಾದ ಬಳಿ ನೌಕಾನೆಲೆಯ ಪ್ರದೇಶದಲ್ಲಿ ನರೇಂದ್ರ ಮೋದಿಯವರ ಸಮಾವೇಶ ಮಾಡುವುದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಮಾಡುವುದಾಗಿ ತಿಳಿಸಿದೆ. ಆದರೆ ಈಗಾಗಲೇ ಪಕ್ಷವೂ ನೌಕಾನೆಲೆ ಅಧಿಕಾರಿಗಳೊಂದಿಗೆ ಮಾತನಾಡಿ ಅನುಮತಿ ಪಡೆದುಕೊಂಡೇ ಸಮಾವೇಶ ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು